ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Jan 13, 2025 | 8:41 PM

ತೆಲಂಗಾಣ ಬಿಜೆಪಿ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ದೆಹಲಿ ನಿವಾಸದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಸಂಕ್ರಾಂತಿ, ಪೊಂಗಲ್ ಆಚರಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ಪ್ರಧಾನಿ ಮೋದಿ ಕೂಡ ನೆರವೇರಿಸಿದ್ದಾರೆ. ಮುಂಬರುವ ಋತುವಿನಲ್ಲಿ ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯನ್ನು ನಾನು ಬಯಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಸಂಪುಟದ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ನಡೆದ ಸಂಕ್ರಾಂತಿ ಆಚರಣೆಯಲ್ಲಿ ಭಾಗವಹಿಸಿದರು. ಈ ವೇಳೆ ತೆಲುಗು ನಟ ಚಿರಂಜೀವಿ, ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಹಲವಾರು ಕೇಂದ್ರ ಸಚಿವರು ಕೂಡ ಹಾಜರಿದ್ದರು. ಸಂಕ್ರಾಂತಿಯನ್ನು ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ತಮ್ಮ ಎಕ್ಸ್​ ಖಾತೆಯಲ್ಲಿ ಸಂಕ್ರಾಂತಿಯ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ನನ್ನ ಸಚಿವ ಸಹೋದ್ಯೋಗಿ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ನಡೆದ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಗಳಲ್ಲಿ ನಾನು ಭಾಗವಹಿಸಿದ್ದೆ. ಅಲ್ಲಿ ಆಯೋಜಿಸಿದ್ದ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ನಾನು ಆನಂದಿಸಿದೆ. ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಅನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿ ಮತ್ತು ಕೃಷಿ ಸಂಪ್ರದಾಯಗಳನ್ನು ಗೌರವಿಸುವ ಹಬ್ಬವಾಗಿದೆ. ಎಲ್ಲರಿಗೂ ಸಂಕ್ರಾಂತಿ ಮತ್ತು ಪೊಂಗಲ್ ಶುಭಾಶಯಗಳು. ಮುಂಬರುವ ಋತುವಿನಲ್ಲಿ ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯನ್ನು ನಾನು ಬಯಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ