AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಯುವಕನಿಂದ ಮೋದಿಗೆ ರಕ್ತದಿಂದ ಬಿಡಿಸಿದ ಭಾವಚಿತ್ರ ಉಡುಗೊರೆ

ಬಾಗಲಕೋಟೆ ಯುವಕನಿಂದ ಮೋದಿಗೆ ರಕ್ತದಿಂದ ಬಿಡಿಸಿದ ಭಾವಚಿತ್ರ ಉಡುಗೊರೆ

ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ|

Updated on: Apr 29, 2024 | 9:29 AM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.29) ಬಾಗಲಕೋಟೆಗೆ ತೆರಳಲಿದ್ದಾರೆ. ಇಲ್ಲಿ ಆಯೋಜಿಸಲಾಗಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಮಖಂಡಿ ‌ಮೂಲದ ಆನಂದ‌ಭಾರತ ಎಂಬ ಮೋದಿ ಅಭಿಮಾನಿ ವಿಶೇಷ ಉಡುಗೊರೆ ನೀಡಲಿದ್ದಾರೆ.

ಬಾಗಲಕೋಟೆ, ಏಪ್ರಿಲ್​ 29: ಲೋಕಸಭೆ ಚುನಾವಣೆ (Lok Sabaha Election) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಉತ್ತರ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ. ರವಿವಾರ (ಏ.28) ರಂದು ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಇಂದು (ಏ.29) ಬಾಗಲಕೋಟೆಗೆ (Bagalkot) ಆಗಮಿಸಲಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಮತಯಾಚಿಸಲಿದ್ದಾರೆ. ಬಾಗಲಕೋಟೆಯಲ್ಲಿ ಬೃಹತ್​ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಮಖಂಡಿ ‌ಮೂಲದ ಆನಂದ‌ಭಾರತ ಎಂಬ ಮೋದಿ ಅಭಿಮಾನಿ ವಿಶೇಷ ಉಡುಗೊರೆ ನೀಡಲಿದ್ದಾರೆ.

ಆನಂದ‌ಭಾರತ ಅವರು ತಮ್ಮ ರಕ್ತದಲ್ಲಿ ತಾಯಿ ಹೀರಾಬೆನ್ ಪುತ್ರ ನರೇಂದ್ರ ಮೋದಿ ಅವರಿಗೆ ಆಶೀರ್ವಾದ ಮಾಡುತ್ತಿರುವ ಭಾವಚಿತ್ರ ಬಿಡಿಸಿದ್ದಾರೆ. ಇದನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲಿದ್ದಾರೆ. ಆನಂದಭಾರತ ಈ ಹಿಂದೆ ಅನೇಕ ಮಹನೀಯರ ಭಾವಚಿತ್ರ ಬಿಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ