PM Modi Bagalkot Rally Live: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ

|

Updated on: Apr 29, 2024 | 11:54 AM

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.29) ಬಾಗಲಕೋಟೆಗೆ ತೆರಳಿದ್ದಾರೆ. ಇಲ್ಲಿ ಆಯೋಜಿಸಲಾಗಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಾಗಲಕೋಟೆ ಮತ್ತು ವಿಜಯಪುರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಬಾಗಲಕೋಟೆ, ಏಪ್ರಿಲ್​ 29: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಉತ್ತರ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ. ರವಿವಾರ (ಏ.28) ರಂದು ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಇಂದು (ಏ.29) ಬಾಗಲಕೋಟೆಗೆ (Bagalkot) ಆಗಮಿಸಲಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಮತಯಾಚಿಸಲಿದ್ದಾರೆ. ಬಾಗಲಕೋಟೆಯಲ್ಲಿ ಬೃಹತ್​ ಸಮಾವೇಶ ನಡೆಯಲಿದೆ.