Loading video

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಮೊದಲ ವಿದೇಶಿ ನಾಯಕರಾದ ಪ್ರಧಾನಿ ಮೋದಿ

Updated on: Jul 04, 2025 | 9:40 PM

ಟ್ರಿನಿಡಾಡ್ ಮತ್ತು ಟೊಬೆಗೊದ ಆರ್ಡರ್ ಆಫ್ ಪ್ರಶಸ್ತಿಯನ್ನು ಪಡೆದ ಮೊದಲ ವಿದೇಶಿ ನಾಯಕರೆಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಇದು ಪ್ರಧಾನಿ ಮೋದಿ ಅವರಿಗೆ ಬೇರೆ ದೇಶ ನೀಡಿದ 25ನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಪ್ರಧಾನಿ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ಮೋದಿ ಅವರ ಜಾಗತಿಕ ನಾಯಕತ್ವ, ವಲಸೆಗಾರರೊಂದಿಗಿನ ಅವರ ಸಂಬಂಧ ಮತ್ತು ಕೋವಿಡ್ -19 ಸಮಯದಲ್ಲಿ ಅವರ ಮಾನವೀಯ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಟ್ರಿನಿಡಾಡ್, ಜುಲೈ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಇಂದು (ಶುಕ್ರವಾರ) ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬೆಗೊ’ ಪ್ರಶಸ್ತಿಯನ್ನು ನೀಡಲಾಯಿತು. ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಗುರುವಾರ ಈ ಪ್ರಶಸ್ತಿಯನ್ನು ಘೋಷಿಸಿದ್ದರು. ಟ್ರಿನಿಡಾಡ್ ಮತ್ತು ಟೊಬೆಗೊದ ಆರ್ಡರ್ ಆಫ್ ಪ್ರಶಸ್ತಿಯನ್ನು ಪಡೆದ ಮೊದಲ ವಿದೇಶಿ ನಾಯಕರೆಂಬ ಹೆಗ್ಗಳಿಕೆಗೂ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ಕೆರಿಬಿಯನ್ ದ್ವೀಪ ರಾಷ್ಟ್ರಕ್ಕೆ 2 ದಿನಗಳ ಭೇಟಿಯಲ್ಲಿದ್ದಾರೆ. ಇದು ಭಾರತದ ಪ್ರಧಾನಿಯವರಿಗೆ ಬೇರೆ ದೇಶವು ನೀಡುತ್ತಿರುವ 25ನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಪ್ರಧಾನ ಮಂತ್ರಿಯವರ ಜಾಗತಿಕ ನಾಯಕತ್ವ, ಭಾರತೀಯ ವಲಸಿಗರೊಂದಿಗಿನ ಅವರ ಆಳವಾದ ಸಂಬಂಧ ಮತ್ತು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅವರ ಮಾನವೀಯ ಪ್ರಯತ್ನಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Jul 04, 2025 09:37 PM