ಕನ್ನಡಿಗರು ಸ್ಥಾಪಿಸಿದ ಬ್ಯಾಂಕ್ ಗಳನ್ನು ಮುಚ್ಚಿಸಿ ಪ್ರಧಾನಿ ಮೋದಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ: ಸಿದ್ದರಾಮಯ್ಯ

ಕನ್ನಡಿಗರು ಸ್ಥಾಪಿಸಿದ ಬ್ಯಾಂಕ್ ಗಳನ್ನು ಮುಚ್ಚಿಸಿ ಪ್ರಧಾನಿ ಮೋದಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 23, 2022 | 3:24 PM

ಕೊರೋನಾ ಪೀಡೆ ಉತ್ತುಂಗದಲ್ಲಿದ್ದಾಗಲೂ ಮೋದಿ ಸರ್ಕಾರ ಕರ್ನಾಟಕಕ್ಕೆ ಆಕ್ಸಿಜನ್ ನೀಡಲಿಲ್ಲ, ಚಾಮರಾಜನಗರದಲ್ಲಿ 36 ಜನ ಕನ್ನಡಿಗರು ಸತ್ತಿದ್ದಕ್ಕೆ ಮೋದಿ ಸರ್ಕಾರವೇ ಹೊಣೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು (Siddaramaiah) ಮಹಾರಾಷ್ಟ್ರದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿನ (political crisis) ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾನೂನಿಗೆ (anti-defection law) ತಿದ್ದುಪಡಿ ತರುವುದು ಅತ್ಯಂತ ಅವಶ್ಯಕವಾಗಿದೆ ಎಂದರು. ಡಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ಕನ್ನಡಿಗರು ಹುಟ್ಟುಹಾಕಿದ ಬ್ಯಾಂಕ್ ಗಳನ್ನು ಬೇರೆ ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿ ಕನ್ನಡಿಗರಿಗೆ ಪ್ರಧಾನಿ ಮೋದಿ ದ್ರೋಹವೆಸಗಿದ್ದಾರೆ. ಈ ಬ್ಯಾಂಕ್ಗಳಲ್ಲಿ 75,000 ಕ್ಕಿಂತ ಹೆಚ್ಚು ಜನ ಕೆಲಸ ಮಾಡುತ್ತಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಕನ್ನಡಿಗರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಕೊರೋನಾ ಪೀಡೆ ಉತ್ತುಂಗದಲ್ಲಿದ್ದಾಗಲೂ ಮೋದಿ ಸರ್ಕಾರ ಕರ್ನಾಟಕಕ್ಕೆ ಆಕ್ಸಿಜನ್ ನೀಡಲಿಲ್ಲ, ಚಾಮರಾಜನಗರದಲ್ಲಿ 36 ಜನ ಕನ್ನಡಿಗರು ಸತ್ತಿದ್ದಕ್ಕೆ ಮೋದಿ ಸರ್ಕಾರವೇ ಹೊಣೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.