ನೌಕಾಪಡೆಯ ಸಿಬ್ಬಂದಿಗೆ ಸ್ವೀಟ್ ತಿನ್ನಿಸಿ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

Updated on: Oct 20, 2025 | 7:03 PM

ಭಾರತದ ಮೊದಲ ದೇಶೀಯವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್‌ನಲ್ಲಿರುವ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಈ ವರ್ಷ ದೀಪಾವಳಿಯನ್ನು ಆಚರಿಸಿದರು. ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ್ ವೇಳೆ ನೌಕಾಪಡೆ ತೋರಿದ ಧೈರ್ಯ ಮತ್ತು ಸಾಹಸಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ನವದೆಹಲಿ, ಅಕ್ಟೋಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi) ಈ ವರ್ಷ ಗೋವಾ ಮತ್ತು ಕಾರವಾರದ ನೌಕಾಪಡೆಯ ಸಿಬ್ಬಂದಿ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಭಾನುವಾರ ಸಂಜೆ ಗೋವಾ ಕರಾವಳಿಗೆ ಆಗಮಿಸಿದ ಮೋದಿ ಐಎನ್​ಎಸ್​ ವಿಕ್ರಾಂತ್​​ನಲ್ಲಿ ಅಧಿಕಾರಿಗಳು ಮತ್ತು ನಾವಿಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಪ್ರಧಾನಿ ಮೋದಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಾಗೇ, ಪ್ರಧಾನಿ ಮೋದಿ ನೌಕಾಪಡೆಯ ಸೈನಿಕರಿಗೆ ಸಹಿ ತಿನ್ನಿಸುವ ಮೂಲಕ ಹಬ್ಬದ ಶುಭಾಶಯಗಳನ್ನು ಕೋರಿದರು.

ಭಾರತದ ಮೊದಲ ದೇಶೀಯವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್‌ನಲ್ಲಿರುವ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಈ ವರ್ಷ ದೀಪಾವಳಿಯನ್ನು ಆಚರಿಸಿದರು. ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ್ ವೇಳೆ ನೌಕಾಪಡೆ ತೋರಿದ ಧೈರ್ಯ ಮತ್ತು ಸಾಹಸಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ