ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಪ್ರಧಾನಿ ಮೋದಿ ಭಾವುಕ ಪೋಸ್ಟ್

Updated on: Jul 08, 2026 | 10:54 AM

ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸ್ನೇಹವು ಅತ್ಯಂತ ಗಟ್ಟಿ, ರೋಮಾಂಚಕ ಹಾಗೂ ಸದಾ ಜೀವಂತವಾಗಿದೆ ಎಂದು ಪ್ರಧಾನಿ ಬರೆದಿದ್ದಾರೆ.

ಜಕಾರ್ತಾ, ಜುಲೈ 08: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸ್ನೇಹವು ಅತ್ಯಂತ ಗಟ್ಟಿ, ರೋಮಾಂಚಕ ಹಾಗೂ ಸದಾ ಜೀವಂತವಾಗಿದೆ ಎಂದು ಪ್ರಧಾನಿ ಬರೆದಿದ್ದಾರೆ.

ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಯಶಸ್ವಿ ದ್ವಿಪಕ್ಷೀಯ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ. ಈ ಪ್ರವಾಸದಲ್ಲಿ ಭಾರತದ ಹೆಮ್ಮೆಯ ‘ಐಐಎಂ ಬೆಂಗಳೂರು’ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಇಂಡೋನೇಷ್ಯಾದಲ್ಲಿ ಸ್ಥಾಪಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೆ, ಇಂಡೋನೇಷ್ಯಾ ದೇಶವು ಭಾರತದ ಶಕ್ತಿಶಾಲಿ ‘ಅಸ್ತ್ರ’ ಕ್ಷಿಪಣಿಗಳನ್ನು ಖರೀದಿಸಲು ನಿರ್ಧರಿಸಿದೆ.

ರಕ್ಷಣೆ, ವ್ಯಾಪಾರ, ಡಿಜಿಟಲ್ ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ವಲಯದಲ್ಲಿ ನಡೆದಿರುವ ಈ ಐತಿಹಾಸಿಕ ಒಪ್ಪಂದಗಳು ಉಭಯ ದೇಶಗಳ ಬಾಂಧವ್ಯವನ್ನು ಮುಂದಿನ ದಿನಗಳಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲಿವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Video Source: @narendramodi( X Account)

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More