ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

Updated on: Mar 22, 2026 | 10:42 PM

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22)  ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಲಭ್ಯತೆ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತೈಲ, ಇಂಧನ ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ನವದೆಹಲಿ, (ಮಾರ್ಚ್ 22): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22)  ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಲಭ್ಯತೆ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತೈಲ, ಇಂಧನ ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ದೇಶದಲ್ಲಿ ವಿದ್ಯುತ್ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲ ವಿದ್ಯುತ್ ಸ್ಥಾವರಗಳಲ್ಲಿ ಪೂರೈಕೆಗೆ ಅಗತ್ಯವಿರುವಷ್ಟು ಕಲ್ಲಿದ್ದಲು ದಾಸ್ತಾನು ಇರುವುದನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಸರ್ವ ಸನ್ನದ್ಧವಾಗಿದೆ. ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ವಿವಿಧ ಕೈಗಾರಿಕಾ ವಲಯಗಳಿಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದನ್ನು ಕೇವಲ ಒಂದು ಪ್ರದೇಶಕ್ಕೆ ಸೀಮಿತಗೊಳಿಸದೆ, ಪರ್ಯಾಯ ದೇಶಗಳಿಂದ ಆಮದು ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಹಾಗೆಯೇ ಭಾರತೀಯ ಉತ್ಪನ್ನಗಳ ರಫ್ತಿಗೆ ಹೊಸ ಮಾರುಕಟ್ಟೆಗಳನ್ನು ಕಂಡುಕೊಳ್ಳಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಯುದ್ಧದ ನೆಪದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಕಾಳಸಂತೆ ನಡೆಯದಂತೆ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ತಿಳಿಸಿದ್ದು, ಅಕ್ರಮ ದಾಸ್ತಾನು ಮಾಡಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ‘ಹೋಲ್ ಆಫ್ ಗವರ್ನಮೆಂಟ್’ ಮಾದರಿಯಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳ ವಿಶೇಷ ಸಮಿತಿಯನ್ನು ರಚಿಸಲು ಪ್ರಧಾನಿ ಆದೇಶಿಸಿದ್ದಾರೆ. ಈ ಸಮಿತಿ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More