ಭ್ರಷ್ಟಾಚಾರ ನಿರ್ಮೂಲ ಮಾಡುವೆ ಅನ್ನುವ ಪ್ರಧಾನಿ ಮೋದಿಯವರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಕಾಣುತ್ತಿಲ್ಲವೇ? ಹೆಚ್ ಡಿ ಕುಮಾರಸ್ವಾಮಿ
ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿದ್ದರೂ ಅವರಿಗೆ ದೇಶವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ರಾಮನಗರ: ದೆಹಲಿಯ ಕೆಂಪುಕೋಟೆಯ (Red Fort) ಮೇಲೆ ನಿಂತು ಭ್ರಷ್ಟಾಚಾರ ನಿರ್ಮೂಲ ಮಾಡ್ತೀನಿ ಅಂತ ಹೇಳುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ (PM Narendra Modi) ಕರ್ನಾಟಕದಲ್ಲಿ ಅವರ ಸರ್ಕಾರ ನಡೆಸುತ್ತಿರುವ 40% ಕಮೀಶನ್ ಕಾಣುತ್ತಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ರಾಮನಗರದಲ್ಲಿ ಮಾರ್ಮಿಕವಾಗಿ ಕೇಳಿದರು. ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿದ್ದರೂ ಅವರಿಗೆ ದೇಶವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.