Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

Updated on: May 10, 2026 | 1:59 PM

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನ ಮತ್ತು ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದಿವ್ಯ ಮತ್ತು ಭವ್ಯ ಧ್ಯಾನ ಮಂದಿರವನ್ನು ಉದ್ಘಾಟಿಸಲಾಯಿತು. ಗುರೂಜಿ ಅವರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಮತ್ತೆ ಬರುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದರು.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ ವಟವೃಕ್ಷದಂತೆ ಬೆಳೆದು ಜಾಗತಿಕವಾಗಿ ಲಕ್ಷಾಂತರ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಬಣ್ಣಿಸಿದ ಪ್ರಧಾನಿಯವರು, ಯೋಗ ಮತ್ತು ಧ್ಯಾನದ ಭಾರತೀಯ ಪರಂಪರೆಯನ್ನು ಸ್ಮರಿಸುತ್ತಾ ಗುರೂಜಿಯವರ 100ನೇ ಜನ್ಮದಿನದ ಶತಮಾನೋತ್ಸವ ಕಾರ್ಯಕ್ರಮಕ್ಕೂ ಮತ್ತೆ ಬರುವುದಾಗಿ ಆತ್ಮವಿಶ್ವಾಸದಿಂದ ಘೋಷಿಸಿದರು.

ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Published on: May 10, 2026 01:59 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More