Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Updated on: Jul 03, 2025 | 7:44 AM

ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.

ಘಾನಾ, ಜುಲೈ 03 ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.

ಜುಲೈ 9 ರವರೆಗೆ ಪ್ರಧಾನಿ ಮೋದಿ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 6 ಮತ್ತು 7 ರಂದು ಬ್ರೆಜಿಲ್‌ನಲ್ಲಿ ನಡೆಯಲಿರುವ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಭಾರತದ ಸಂಬಂಧಗಳಿಗೆ ಹೊಸ ಆಯಾಮವನ್ನು ನೀಡುವ ನಿರೀಕ್ಷೆಯಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More