ಪ್ರಧಾನಿ ಮೋದಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರಿಷಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಈ ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ವಿದೇಶಿ ರಾಷ್ಟ್ರವೊಂದು ನೀಡುವ 21ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.
ನವದೆಹಲಿ, (ಮಾರ್ಚ್ 11): ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರಿಷಸ್ ದೇಶದ ಅತ್ಯುನ್ನತ ಪ್ರಶಸ್ತಿಯಾದ “ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್” ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದ್ದಾರೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಈ ಪ್ರತಿಷ್ಠಿತ ಗೌರವವನ್ನು ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಮ್ ಈ ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರಶಸ್ತಿ ವಿದೇಶಿ ರಾಷ್ಟ್ರವೊಂದು ಪ್ರಧಾನಿ ಮೋದಿಗೆ ನೀಡಿದ 21 ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.
ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್ ಮಾರಿಷಸ್‌ನಲ್ಲಿ ಅತ್ಯುನ್ನತ ಗೌರವವಾಗಿದೆ. ಇದನ್ನು ರಾಷ್ಟ್ರ ಮತ್ತು ಅದರ ಜನರಿಗೆ ಅಸಾಧಾರಣ ಸೇವೆಗಾಗಿ ನೀಡಲಾಗುತ್ತದೆ. ಈ ವಿಶಿಷ್ಟ ಮನ್ನಣೆ ಪಡೆದ ಐದನೇ ವಿದೇಶಿ ಪ್ರಜೆಯೆಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ ಎಂದು ರಾಮ್‌ಗೂಲಮ್ ಹೇಳಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರನ್ನು ಭೇಟಿಯಾದರು. ಇಬ್ಬರೂ ನಾಯಕರು ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ