Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಭಾರತೀಯ ಪ್ರಧಾನಿ ಮೋದಿ

ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಭಾರತೀಯ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Mar 12, 2025 | 5:42 PM

ಮಾರಿಷಸ್ ಪ್ರಧಾನ ಮಂತ್ರಿ ರಾಮ್‌ಗೂಲಮ್ ಅವರ ಆಹ್ವಾನದ ಮೇರೆಗೆ ಅವರು ಎರಡು ದಿನಗಳ ಕಾಲ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. ಎರಡು ದಿನಗಳ ಮಾರಿಷಸ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರಿಷಸ್‌ನ ಅಧ್ಯಕ್ಷ ಧರಮ್ ಗೋಖೂಲ್ ಇಂದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಗೌರವವನ್ನು ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ.

ಪೋರ್ಟ್ ಲೂಯಿಸ್, (ಮಾರ್ಚ್ 12): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್” ಅನ್ನು ಇಂದು ದ್ವೀಪ ರಾಷ್ಟ್ರದಲ್ಲಿ ನಡೆದ ಸಮಾರಂಭದಲ್ಲಿ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು ಸ್ವೀಕರಿಸಿದ ನರೇಂದ್ರ ಮೋದಿ, “ಮಾರಿಷಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇದು ಕೇವಲ ನನಗೆ ಸಿಕ್ಕ ಗೌರವವಲ್ಲ, 1.4 ಶತಕೋಟಿ ಭಾರತೀಯರಿಗೆ ಸಿಕ್ಕ ಗೌರವ. ಇದು ಭಾರತ ಮತ್ತು ಮಾರಿಷಸ್ ನಡುವಿನ ಶತಮಾನಗಳಷ್ಟು ಹಳೆಯದಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಂಧಗಳ ಸಂಬಂಧಕ್ಕೆ ಸಿಕ್ಕ ಗೌರವವಾಗಿದೆ” ಎಂದು ಹೇಳಿದ್ದಾರೆ.

ಈ ಗೌರವವನ್ನು ಪಡೆದ ಮೊದಲ ಭಾರತೀಯರೆಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಇದು ಪ್ರಧಾನಿ ಮೋದಿಗೆ ವಿದೇಶದಿಂದ ನೀಡಿದ 21ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ. ಪ್ರಧಾನಿ ಮೋದಿ ಮಂಗಳವಾರ ರಾಜ್ಯ ಭವನದಲ್ಲಿ ಮಾರಿಷಸ್ ಅಧ್ಯಕ್ಷ ಧರಂಬೀರ್ ಗೋಖೂಲ್ ಅವರನ್ನು ಭೇಟಿಯಾದರು. ಮಾರಿಷಸ್‌ನ ಪ್ರಧಾನಿ ನವೀನಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ ಅವರು ಎರಡು ದಿನಗಳ ಕಾಲ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಮಾರಿಷಸ್ ಜನತೆಗೆ ರಾಷ್ಟ್ರೀಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ