Video: ಐದು ದಿನ, ಮೂರು ದೇಶ, ಜಿ7 ಶೃಂಗಸಭೆ, ಸೈಪ್ರಸ್‌ಗೆ ಹೊರಟ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಸೈಪ್ರಸ್‌ಗೆ ತೆರಳಿದ್ದಾರೆ. ಅವರು ಐದು ದಿನಗಳ ಕಾಲ ವಿದೇಶ ಪ್ರವಾಸದಲ್ಲಿರಲಿದ್ದು, ಮೂರು ದೇಶಗಳಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಜೂನ್ 15 ರಿಂದ ಜೂನ್ 19 ರವರೆಗೆ ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಮೊದಲು ಸೈಪ್ರಸ್‌ಗೆ ಹೋಗಲಿದ್ದಾರೆ. ನಂತರ ಕೆನಡಾದಲ್ಲಿ ಜಿ -7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಕ್ರೊಯೇಷಿಯಾಕ್ಕೆ ತೆರಳಲಿದ್ದಾರೆ.

ಸೈಪ್ರಸ್ ಗಣರಾಜ್ಯದ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂನ್ 15 ರಂದು ಸೈಪ್ರಸ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದಾರೆ. ಕಳೆದ 2 ದಶಕಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಸೈಪ್ರಸ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ನಿಕೋಸ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 15, 2025 08:56 AM