AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಯುಎಸ್ ಭೇಟಿಯ ಹೈಲೈಟ್ಸ್

ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಯುಎಸ್ ಭೇಟಿಯ ಹೈಲೈಟ್ಸ್

ಸುಷ್ಮಾ ಚಕ್ರೆ
|

Updated on:Feb 14, 2025 | 4:27 PM

Share

ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಭೇಟಿಗಳನ್ನು ಮುಕ್ತಾಯಗೊಳಿಸಿದ್ದಾರೆ. ವ್ಯಾಪಾರ, ತಂತ್ರಜ್ಞಾನ ಮತ್ತು ರಕ್ಷಣಾ ಸಹಕಾರದ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆಗಳನ್ನು ನಡೆಸಿದ್ದಾರೆ. ಬುಧವಾರ ಫ್ರಾನ್ಸ್‌ನಿಂದ ಅಮೆರಿಕಕ್ಕೆ ಆಗಮಿಸಿದ ಮೋದಿ ಕಳೆದ ತಿಂಗಳು ರಿಪಬ್ಲಿಕನ್ ನಾಯಕ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಿ ಭಾರತಕ್ಕೆ ತೆರಳಿದ್ದಾರೆ. ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಹಲವು ವಿಷಯಗಳ ಕುರಿತು ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು. ಬುಧವಾರ ಫ್ರಾನ್ಸ್‌ನಿಂದ ಅಮೆರಿಕಕ್ಕೆ ಆಗಮಿಸಿದ ಮೋದಿ ಕಳೆದ ತಿಂಗಳು ರಿಪಬ್ಲಿಕನ್ ನಾಯಕ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಇಬ್ಬರ ಮಾತುಕತೆಯ ಸಮಯದಲ್ಲಿ, ಭಾರತ ಮತ್ತು ಅಮೆರಿಕ ಎರಡೂ ದೇಶಗಳು ರಕ್ಷಣೆ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನ ಸೇರಿದಂತೆ ಹಲವಾರು ನಿರ್ಣಾಯಕ ಕ್ಷೇತ್ರಗಳಲ್ಲಿ ತಮ್ಮ ಕಾರ್ಯತಂತ್ರದ ಸಂಬಂಧಗಳನ್ನು ವಿಸ್ತರಿಸುವಲ್ಲಿ ದೊಡ್ಡ ಹೆಜ್ಜೆ ಇಡಲು ನಿರ್ಧರಿಸಿದವು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 14, 2025 04:27 PM