ರಷ್ಯಾದ ಅಧ್ಯಕ್ಷ ಪುಟಿನ್​ಗೆ ಕೂಡಲೇ ಯುದ್ಧವಿರಾಮ ಘೋಷಿಸುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 25, 2022 | 9:16 PM

ಪ್ರಧಾನಿ ಮೋದಿ ಅವರು ಉಕ್ರೇನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷಿತ ವಾಪಸ್ಸಾತಿ ತಮ್ಮ ಅತ್ಯುನ್ನತ ಆದ್ಯತೆಯಾಗಿದೆ ಎನ್ನುವುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು.

ಹಲವಾರು ಪ್ರಮುಖ ದೇಶಗಳು, ಪಾಶ್ಚಿಮಾತ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಸಲಹೆಯನ್ನು ಧಿಕ್ಕರಿಸಿ ಉಕ್ರೇನ್ ಮೇಲೆ ದಾಳಿ ನಡೆಸಿಸ ರಷ್ಯಾ ಅಂತರರಾಷ್ಟ್ರೀಯ ಸಮುದಾಯದ ಆಕ್ರೋಷಕ್ಕೆ ಗುರಿಯಾಗಿದ್ದಾರೆ. ನ್ಯಾಟೋ (NATO) ಜೊತೆ ನಿಕಟ ಸಂಬಂಧ ಇಟ್ಟುಕೊಳ್ಳುವುದು ಬೇಡ ಅಂತ ತಾನು ಸಲಹೆ ನೀಡಿದರೂ ಉಕ್ರೇನ್ ಅದನ್ನು ಧಿಕ್ಕರಿಸಿದೆ ಎಂಬ ಕಾರಣಕ್ಕೆ ವಿಶೇಷ ಮಿಲಿಟರಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (Vladimir Putin) ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. ಏತನ್ಮಧ್ಯೆ. ರಷ್ಯನ್ ದಾಳಿಯಿಂದ ಕಂಗೆಟ್ಟಿರುವ ಉಕ್ರೇನ್, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿತು. ಗುರುವಾರ ಪುಟಿನ್ ಅವರೊಂದಿಗೆ ಮಾತಾಡುವ ಮೊದಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯೊಂದಿಗೆ ಒಂದು ಸಭೆಯನ್ನು ನಡೆಸಿದರು.

ಗುರುವಾರ ರಾತ್ರಿ ಪುಟಿನ್ ರೊಂದಿಗೆ ದೂರವಾಣಿ ಮೂಲಕ ಮಾತಾಡಿದ ಪ್ರಧಾನಿ ಮೋದಿ ಉಕ್ರೇನೊಂದಿಗೆ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ದ್ವಿಪಕ್ಷೀಯ ಮಾತುಕತೆ ಮತ್ತು ರಾಜತಾಂತ್ರಿಕ ಚರ್ಚೆಯ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು, ಹಿಂಸಾಚಾರದಿಂದ ಏನನ್ನೂ ಸಾಧಿಸುವುದು ಸಾಧ್ಯವಿಲ್ಲ ಎಂದು ಹೇಳಿ ಕೂಡಲೇ ಯುದ್ಧವಿರಾಮ ಘೋಷಿಸುವಂತೆ ಹೇಳಿದರು.

ಅದಾದ ಮೇಲೆ, ಪ್ರಧಾನಿ ಮೋದಿ ಅವರು ಉಕ್ರೇನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷಿತ ವಾಪಸ್ಸಾತಿ ತಮ್ಮ ಅತ್ಯುನ್ನತ ಆದ್ಯತೆಯಾಗಿದೆ ಎನ್ನುವುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು.

ಪ್ರಧಾನಿ ಅವರ ಮಾತಿನ ನಂತರ ರಷ್ಯಾ ಯಾಕೆ ಉಕ್ರೇನ್ ಮೇಲೆ ದಾಳಿ ನಡೆಸುವ ಅನಿವಾರ್ಯತೆ ಎದುರಾಯಿತು ಅನ್ನುವದನ್ನು ವಿವರಿಸಿದರು.

ವಿಶೇಷ ಮಾಹಿತಿ:

ಉಕ್ರೇನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳ ಹಾಗೂ ಕನ್ನಡಿಗರ ಬಗ್ಗೆ ಮಾಹಿತಿಗೆ ವೆಬ್ ಪೋರ್ಟಲ್ ಸ್ಥಾಪನೆ ಮಾಡಲಾಗಿದೆ. KSDMA ಮಾಹಿತಿಗಾಗಿ ವೆಬ್ ಪೋರ್ಟಲ್ ಸ್ಥಾಪಿಸಿದೆ. ಉಕ್ರೇನಲ್ಲಿ ಸಿಲುಕಿದವರ ವಿವರ, ವಿದೇಶಾಂಗ ಇಲಾಖೆ, ಭಾರತ ಸರ್ಕಾರದ ವೆಬ್ಸೈಟ್ನಿಂದ ಸಂಗ್ರಹಿಸಿದ ಮಾಹಿತಿ, ಹೆಲ್ಪ್ಲೈನ್, ಇ-ಮೇಲ್, ಮಾರ್ಗಸೂಚಿ ಮಾಹಿತಿ, ಎಲ್ಲಾ ಮಾಹಿತಿಗಳನ್ನು ಹೊಂದಿರುವ ವೆಬ್ ಪೋರ್ಟಲ್ ಸ್ಥಾಪಿಸಲಾಗಿದೆ.

ವೆಬ್ ಪೋರ್ಟಲ್ ಲಿಂಕ್: http://Ukraine.Karnataka.tech

ಇದನ್ನೂ ಓದಿ:  Ukraine Crisis: ರಷ್ಯಾದ ಮಿಲಿಟರಿ ಪಡೆಗಳಲ್ಲಿ 800ಕ್ಕೂ ಹೆಚ್ಚು ಸಾವು-ನೋವುಗಳಾಗಿವೆ: ಉಕ್ರೇನ್ ರಕ್ಷಣಾ ಸಚಿವಾಲಯ ಹೇಳಿಕೆ