ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Updated on: Apr 28, 2026 | 10:05 PM

ಪ್ರಧಾನಿ ನರೇಂದ್ರ ಮೋದಿ ಅವರು 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್ ನಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲಿಗೆ ಚಾಲನೆ ನೀಡಲಾಗಿದೆ. ಅಯೋಧ್ಯಾ-ಮುಂಬೈ ಸೇವೆಯು ಶ್ರೀ ರಾಮ ಮಂದಿರಕ್ಕೆ ಸಂಪರ್ಕವನ್ನು ಹೆಚ್ಚಿಸುತ್ತದೆ, ಪ್ರಮುಖ ಧಾರ್ಮಿಕ ಸ್ಥಳಗಳ ನಡುವಿನ ಸಂಪರ್ಕವನ್ನು ಬಲಪಡಿಸುತ್ತದೆ.

ನವದೆಹಲಿ, ಏಪ್ರಿಲ್ 28: ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಡುವಿನ ರೈಲು ಸಂಪರ್ಕಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಾರಾಣಸಿಯಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲುಗಳು ಸಂಚರಿಸಲಿವೆ. ಉತ್ತರ ಪ್ರದೇಶದಲ್ಲಿ ವಾರಾಣಸಿ ಮತ್ತು ಅಯೋಧ್ಯೆ ಪ್ರಮುಖ ಆಧ್ಯಾತ್ಮಿಕ ತಾಣಗಳಾಗಿರುವುದರಿಂದ ವಾರ್ಷಿಕವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುವುದರಿಂದ ಮತ್ತು ಮುಂಬೈ ಮತ್ತು ಪುಣೆಯಂತಹ ಮಹಾನಗರಗಳಿಗೆ ರೈಲು ಸಂಪರ್ಕವು ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More