Delhi Assembly Poll Results: ಗೆಲುವಿನ ಸಂಭ್ರಮಾಚರಣೆಗೆ ಕೇಂದ್ರ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಭವ್ಯ ಸ್ವಾಗತ!
Delhi Assembly Poll Results: ಈಗಾಗಲೇ ವರದಿಯಾಗಿರುವಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಸುಮಾರು ಎರಡೂವರೆ ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಸೋಜಿಗ ಹುಟ್ಟಿಸುವ ಸಂಗತಿಯೆಂದರೆ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದ ಅರವಿಂದ್ ಕೇಜ್ರಿವಾಲ್ ಖುದ್ದು ಚುನಾವಣೆಯಲ್ಲಿ ಸೋತಿದ್ದು. ಗೆದ್ದಿರುವ ಬಿಜೆಪಿ ನಾಯಕರೆಲ್ಲ ಪ್ರಧಾನಿ ಮೋದಿಯವರ ಕಾರ್ಯವೈಖರಿಯಿಂದ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎನ್ನುತ್ತಿದ್ದಾರೆ.
ದೆಹಲಿ: ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ 27 ವರ್ಷಗಳ ನಂತರ ಪುನಃ ಅಧಿಕಾರಕ್ಕೆ ಬಂದಿದೆ. ಇದೇ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಗೆಲುವಿನ ರೂವಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂಭ್ರಮದಲ್ಲಿ ಭಾಗಿಯಾಗಲು ಕಚೇರಿಗೆ ಆಗಮಿಸಿದರು. ಅವರು ಬರುತ್ತಿದ್ದಂತೆಯೇ ಕಚೇರಿಯಲ್ಲಿ ಮತ್ತು ಹೊರಗಡೆ ನೆರೆದಿದ್ದ ಕಾರ್ಯಕರ್ತರು ಮತ್ತು ಬೆಂಬಲಿಗರು ಮೋದಿ ಮೋದಿ ಎಂದು ಕೂಗುತ್ತಾ ಸ್ವಾಗತಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಶಾಲು ಹೊದಿಸಿ, ಬೋಕೆಯನ್ನು ನೀಡಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 08, 2025 08:12 PM
Latest Videos

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ

ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು

ಲೋಡ್ ಶೆಡ್ಡಿಂಗ್: ವಿದ್ಯುತ್ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
