ಗುಜರಾತ್‌ನ ಸೋಮನಾಥ ಜ್ಯೋತಿರ್ಲಿಂಗ ಮಂದಿರದಲ್ಲಿ ಪ್ರಧಾನಿ ಮೋದಿ ಪೂಜೆ
ಪಿಎಂ ನರೇಂದ್ರ ಮೋದಿ ಇಂದು ಬೆಳಿಗ್ಗೆ ಅನಂತ್ ಅಂಬಾನಿಯವರ ಪ್ರಾಣಿಗಳ ರಕ್ಷಣೆ, ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಇಂದು ಸಂಜೆ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಜಾಮ್‌ನಗರಕ್ಕೆ ಆಗಮಿಸಿದರು. ಮಾರ್ಚ್ 3 ರಂದು ಗಿರ್ ರಾಷ್ಟ್ರೀಯ ಉದ್ಯಾನವನದ ಪ್ರಧಾನ ಕಚೇರಿಯಾಗಿರುವ ಸಸಾನ್‌ನಲ್ಲಿ ರಾತ್ರಿ ತಂಗಿದ ನಂತರ, ಪ್ರಧಾನಿಯವರು ಜಂಗಲ್ ಸಫಾರಿಯನ್ನು ಆನಂದಿಸಲಿದ್ದಾರೆ.
ಜಾಮ್‌ನಗರ (ಮಾರ್ಚ್ 2): ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸೋಮನಾಥ ಜ್ಯೋತಿರ್ಲಿಂಗ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ 3 ದಿನಗಳ ಪ್ರವಾಸಕ್ಕಾಗಿ ಗುಜರಾತ್‌ನಲ್ಲಿದ್ದಾರೆ. ಪ್ರಧಾನಿ ಮೋದಿ ತಮ್ಮ ರಾಜ್ಯ ಭೇಟಿಯ ಸಮಯದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ಸಂಜೆ ಗುಜರಾತ್‌ಗೆ ಆಗಮಿಸಿದರು. ಇಂದು ಸಂಜೆ ಪ್ರಧಾನಿ ಮೋದಿ ಶ್ರೀ ಸೋಮನಾಥ ಜ್ಯೋತಿರ್ಲಿಂಗ ಮಂದಿರ ಆವರಣದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವಿಗ್ರಹಕ್ಕೆ ನಮನ ಸಲ್ಲಿಸಿದರು. ಹಾಗೇ, ದೇವಸ್ಥಾನದಲ್ಲಿ ಪೂಜೆಯನ್ನೂ ಮಾಡಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 02, 2025 06:54 PM