Video: ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದ ಪ್ರಧಾನಿ ಮೋದಿ

Updated on: Jul 04, 2025 | 9:48 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ರಿನಿಡಾಡ್ ಮತ್ತು ಟೊಬಾಗೊ ತಲುಪಿದ್ದಾರೆ. ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ತಮ್ಮ 38 ಸಚಿವರು ಮತ್ತು ನಾಲ್ವರು ಸಂಸದರೊಂದಿಗೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ.

ಟ್ರಿನಿಡಾಡ್, ಜುಲೈ 04: ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ರಿನಿಡಾಡ್ ಮತ್ತು ಟೊಬಾಗೊ ತಲುಪಿದ್ದಾರೆ. ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ತಮ್ಮ 38 ಸಚಿವರು ಮತ್ತು ನಾಲ್ವರು ಸಂಸದರೊಂದಿಗೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ. ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಮೋದಿ, ಕಮಲಾ ಅವರ ಪೂರ್ವಜರು ಬಿಹಾರದ ಬಕ್ಸಾರ್​​ನವರು ಅವರೂ ಕೂಡ ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು. ಕಾಮನ್ವೆಲ್ತ್ ರಾಷ್ಟ್ರಗಳ ಅಧ್ಯಕ್ಷರಾದ ಮೊದಲ ಮಹಿಳೆ ಕೆರಿಬಿಯನ್ ದೇಶದ ಮೊದಲ ಮಹಿಳಾ ಪ್ರಧಾನಿ.

ಪ್ರಧಾನಿ ಮೋದಿ ಅವರು 25 ವರ್ಷಗಳ ಹಿಂದಿನ ತಮ್ಮ ಭೇಟಿಯನ್ನು ನೆನಪಿಸಿಕೊಂಡರು, ಅಂದಿನಿಂದ ಕೆರಿಬಿಯನ್ ದೇಶ ಮತ್ತು ಭಾರತದ ನಡುವಿನ ಸ್ನೇಹ ಹೇಗೆ ಬಲಗೊಂಡಿದೆ ಎಂಬುದನ್ನು ಗಮನಿಸಿದರು.
ಟ್ರಿನಿಡಾಡ್ ಮತ್ತು ಟೊಬಾಗೋ ಒಂದು ಸಣ್ಣ ದೇಶವಾಗಿದ್ದರೂ, ಭಾರತದ ಜೋಧ್‌ಪುರಕ್ಕಿಂತ ಚಿಕ್ಕದಾಗಿದ್ದರೂ, ಭಾರತೀಯ ಸಮುದಾಯವು ದೇಶದ ಸಂಸ್ಕೃತಿ ಮತ್ತು ಆರ್ಥಿಕತೆಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದೆ. ಭಾರತೀಯ ಸಂಪ್ರದಾಯಗಳನ್ನು ಅವರ ಆಹಾರ, ಸಂಗೀತ, ಭಾಷೆ ಮತ್ತು ಧಾರ್ಮಿಕ ಹಬ್ಬಗಳಲ್ಲಿ ಇನ್ನೂ ಸ್ಪಷ್ಟವಾಗಿ ಕಾಣಬಹುದು ಎಂದರು.

ಇದು ಪ್ರಧಾನಿಯಾಗಿ ಈ ಕೆರಿಬಿಯನ್ ದೇಶಕ್ಕೆ ಮೋದಿಯವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ ಮತ್ತು 1999 ರ ನಂತರ ಯಾವುದೇ ಭಾರತೀಯ ಪ್ರಧಾನಿಯ ಮೊದಲ ಅಧಿಕೃತ ಭೇಟಿಯಾಗಿದೆ. ಈ ಭೇಟಿ ಟ್ರಿನಿಡಾಡ್ ಪ್ರಧಾನಿಯವರ ಆಹ್ವಾನದ ಮೇರೆಗೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೋ ಅಧ್ಯಕ್ಷೆ ಕ್ರಿಸ್ಟೀನ್ ಕಾರ್ಲಾ ಕಂಗಲೂ ಮತ್ತು ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರನ್ನು ಭೇಟಿ ಮಾಡಲಿದ್ದು, ಅಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಈ ಸಭೆಗಳ ಉದ್ದೇಶವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jul 04, 2025 08:00 AM