ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈನಲ್ಲಿ ರೋಡ್‌ಶೋ ನಡೆಸಿದ್ದಾರೆ, ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ 13,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ಮಾಡಲಿದ್ದಾರೆ. ಮೊದಲಿಗೆ ಚೆನ್ನೈ ಮೆಟ್ರೋದಲ್ಲಿ ಪೊರುರ್ ಬೈಪಾಸ್‌ನಿಂದ ಪೂನಮಲ್ಲಿ ಬೈಪಾಸ್‌ವರೆಗೆ ಪ್ರಯಾಣಿಸಿರುವ ಮೋದಿ, ಬಳಿಕ ಜಲಕಂಠೇಶ್ವರರ್ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರ ಐಐಟಿ ಮದ್ರಾಸ್‌ನಲ್ಲಿರುವ ಸುಧಾ ಗೋಪಾಲಕೃಷ್ಣನ್ ಬ್ರೈನ್ ಸೆಂಟರ್ಗೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಲಿದ್ದಾರೆ.
ಚೆನ್ನೈ, ಅಕ್ಟೋಬರ್ 11: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈನಲ್ಲಿ ರೋಡ್‌ಶೋ ನಡೆಸಿದ್ದಾರೆ, ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ 13,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ಮಾಡಲಿದ್ದಾರೆ. ಮೊದಲಿಗೆ ಚೆನ್ನೈ ಮೆಟ್ರೋದಲ್ಲಿ ಪೊರುರ್ ಬೈಪಾಸ್‌ನಿಂದ ಪೂನಮಲ್ಲಿ ಬೈಪಾಸ್‌ವರೆಗೆ ಪ್ರಯಾಣಿಸಿರುವ ಮೋದಿ, ಬಳಿಕ ಜಲಕಂಠೇಶ್ವರರ್ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರ ಐಐಟಿ ಮದ್ರಾಸ್‌ನಲ್ಲಿರುವ ಸುಧಾ ಗೋಪಾಲಕೃಷ್ಣನ್ ಬ್ರೈನ್ ಸೆಂಟರ್ಗೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಲಿದ್ದಾರೆ.
ಮೆಟ್ರೋ, ಹೆದ್ದಾರಿ, ರೈಲ್ವೆ, ಬಂದರು, ಪೆಟ್ರೋಲಿಯಂ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಈ ಕಾರ್ಯಕ್ರಮದ ಪ್ರಮುಖ ಭಾಗವಾಗಿವೆ. ಚೆನ್ನೈ ಮೆಟ್ರೋದ ಎರಡನೇ ಹಂತದ ಪೂನಮಲ್ಲಿ–ವಡಪಳನಿ ಮಾರ್ಗವೂ ಇದರಲ್ಲಿ ಸೇರಿದೆ. ಇದರ ಜೊತೆಗೆ, ಚೆನ್ನೈನ ಜೈಗೋಪಾಲ್ ಗರೋಡಿಯ ಹಿಂದೂ ವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

