ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

Updated on: Oct 11, 2026 | 1:54 PM

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈನಲ್ಲಿ ರೋಡ್‌ಶೋ ನಡೆಸಿದ್ದಾರೆ, ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ 13,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ಮಾಡಲಿದ್ದಾರೆ. ಮೊದಲಿಗೆ ಚೆನ್ನೈ ಮೆಟ್ರೋದಲ್ಲಿ ಪೊರುರ್ ಬೈಪಾಸ್‌ನಿಂದ ಪೂನಮಲ್ಲಿ ಬೈಪಾಸ್‌ವರೆಗೆ ಪ್ರಯಾಣಿಸಿರುವ ಮೋದಿ, ಬಳಿಕ ಜಲಕಂಠೇಶ್ವರರ್ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರ ಐಐಟಿ ಮದ್ರಾಸ್‌ನಲ್ಲಿರುವ ಸುಧಾ ಗೋಪಾಲಕೃಷ್ಣನ್ ಬ್ರೈನ್ ಸೆಂಟರ್ಗೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಲಿದ್ದಾರೆ.

ಚೆನ್ನೈ, ಅಕ್ಟೋಬರ್ 11: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈನಲ್ಲಿ ರೋಡ್‌ಶೋ ನಡೆಸಿದ್ದಾರೆ, ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ 13,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ಮಾಡಲಿದ್ದಾರೆ. ಮೊದಲಿಗೆ ಚೆನ್ನೈ ಮೆಟ್ರೋದಲ್ಲಿ ಪೊರುರ್ ಬೈಪಾಸ್‌ನಿಂದ ಪೂನಮಲ್ಲಿ ಬೈಪಾಸ್‌ವರೆಗೆ ಪ್ರಯಾಣಿಸಿರುವ ಮೋದಿ, ಬಳಿಕ ಜಲಕಂಠೇಶ್ವರರ್ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರ ಐಐಟಿ ಮದ್ರಾಸ್‌ನಲ್ಲಿರುವ ಸುಧಾ ಗೋಪಾಲಕೃಷ್ಣನ್ ಬ್ರೈನ್ ಸೆಂಟರ್ಗೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಲಿದ್ದಾರೆ.

ಮೆಟ್ರೋ, ಹೆದ್ದಾರಿ, ರೈಲ್ವೆ, ಬಂದರು, ಪೆಟ್ರೋಲಿಯಂ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಈ ಕಾರ್ಯಕ್ರಮದ ಪ್ರಮುಖ ಭಾಗವಾಗಿವೆ. ಚೆನ್ನೈ ಮೆಟ್ರೋದ ಎರಡನೇ ಹಂತದ ಪೂನಮಲ್ಲಿ–ವಡಪಳನಿ ಮಾರ್ಗವೂ ಇದರಲ್ಲಿ ಸೇರಿದೆ. ಇದರ ಜೊತೆಗೆ, ಚೆನ್ನೈನ ಜೈಗೋಪಾಲ್ ಗರೋಡಿಯ ಹಿಂದೂ ವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More