ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Updated on: Apr 04, 2026 | 9:06 PM

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಭಾರಿ ಜನಸಮೂಹ ಸೇರಿತ್ತು. ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಕೇರಳದ ಚುನಾವಣಾ ಪ್ರಚಾರದ ಬಿಸಿಯನ್ನು ಹೆಚ್ಚಿಸಿದರು. ಕಿಲ್ಲಿಪಾಲಂ ಜಂಕ್ಷನ್‌ನಿಂದ ಕರಮನವರೆಗಿನ 1.5 ಕಿ.ಮೀ ಉದ್ದಕ್ಕೂ ಭಾರಿ ಜನಸಮೂಹವನ್ನು ಸೆಳೆದರು.

ತಿರುವಲ್ಲಾ, ಏಪ್ರಿಲ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪುದುಚೆರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಇಂದು ಕೇರಳಕ್ಕೆ (ಕೇರಳಂ) ತೆರಳಿದ್ದಾರೆ. ಕೇರಳದ ತಿರುವಲ್ಲಾದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಎಡ ಮತ್ತು ಕಾಂಗ್ರೆಸ್ ವಿರುದ್ಧ ನಡೆದ ವಾಗ್ದಾಳಿಯ ನಂತರ ಪ್ರಧಾನಿ ಮೋದಿ ಕೇರಳದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ.

“ತಿರುವಲ್ಲಾದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನರು ಎನ್‌ಡಿಎ ಮೇಲಿನ ನಿಮ್ಮ ನಂಬಿಕೆಯನ್ನು ತೋರಿಸುತ್ತಿದೆ. ನನ್ನ ತಾಯಂದಿರು ಮತ್ತು ಸಹೋದರಿಯರು ತೋರಿಸಿದ ಪ್ರೀತಿ ಮತ್ತು ವಿಶ್ವಾಸವು ಇಂದು ಕೇರಳದಾದ್ಯಂತ ಇದೇ ರೀತಿಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More