ಒಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ; ಪದಕ ವಿಜೇತರಿಂದ ವಿಶೇಷ ಉಡುಗೊರೆ

|

Updated on: Aug 15, 2024 | 3:01 PM

Paris Olympics 2024: 2024 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ಭಾಗಶಃ ಸ್ಪರ್ಧಿಗಳು ದೇಶಕ್ಕೆ ಮರಳಿದ್ದಾರೆ. ಕ್ರೀಡಾಕೂಟದುದ್ದಕ್ಕೂ ತಮ್ಮ ಮಾತುಗಳಿಂದ ದೇಶದ ಸ್ಪರ್ಧಿಗಳ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.

2024 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ಭಾಗಶಃ ಸ್ಪರ್ಧಿಗಳು ದೇಶಕ್ಕೆ ಮರಳಿದ್ದಾರೆ. ಕ್ರೀಡಾಕೂಟದುದ್ದಕ್ಕೂ ತಮ್ಮ ಮಾತುಗಳಿಂದ ದೇಶದ ಸ್ಪರ್ಧಿಗಳ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ. ವಿಡಿಯೋದಲ್ಲಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಭಾರತೀಯ ಹಾಕಿ ತಂಡವನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರರು ಪ್ರಧಾನಿಗೆ ತಮ್ಮ ಪದಕಗಳನ್ನು ತೋರಿಸಿದ್ದಾರೆ. ಇದರ ಜೊತೆಗೆ ಹಾಕಿ ಸ್ಟಿಕ್ ಹಾಗೂ ಆಟಗಾರರು ಸಹಿ ಮಾಡಿರುವ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ. ಆ ನಂತರ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ಮನು ಭಾಕರ್, ಮೋಧಿ ಅವರಿಗೆ ಪಿಸ್ತೂಲ್ ತೋರಿಸಿದ್ದಾರೆ. ನಂತರ ಪ್ರಧಾನಿ ಮೋದಿ ಅವರು ಅಮನ್ ಸೆಹ್ರಾವತ್ ಮತ್ತು ಸ್ವಪ್ನಿಲ್ ಕುಸಾಲೆ ಅವರನ್ನು ಭೇಟಿ ಮಾಡಿ, ಅವರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದರ ನಂತರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ದೇಶವನ್ನು ಸ್ಪರ್ಧಿಸಿದ್ದ ಅಥ್ಲೀಟ್​ಗಳ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ.

ಪ್ಯಾರಿಸ್‌ನಲ್ಲಿ ಭಾರತಕ್ಕೆ 6 ಪದಕ

ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟಕ್ಕೆ ಭಾರತದಿಂದ 47 ಮಹಿಳಾ ಕ್ರೀಡಾಪಟುಗಳು ಸೇರಿದಂತೆ 117 ಆಟಗಾರರನ್ನು ಕಳುಹಿಸಲಾಗಿತ್ತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾದ ಪಿಆರ್ ಶ್ರೀಜೇಶ್ (ಹಾಕಿ) ಮತ್ತು ಮನು ಭಾಕರ್ (ಶೂಟಿಂಗ್) ರಾಷ್ಟ್ರಗಳ ಪರೇಡ್‌ನಲ್ಲಿ ಧ್ವಜಧಾರಿಗಳಾಗಿ ಭಾರತವನ್ನು ಪ್ರತಿನಿಧಿಸಿದ್ದರು.

ಆದಾಗ್ಯೂ, ಟೋಕಿಯೊ ಒಲಿಂಪಿಕ್ಸ್​ಗೆ ಹೋಲಿಸಿದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರದರ್ಶನ ಸ್ವಲ್ಪ ಕೆಳಮಟ್ಟದಲ್ಲಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಬೆಳ್ಳಿ ಸೇರಿದಂತೆ ಆರು ಪದಕಗಳನ್ನು ಗೆದ್ದಿತ್ತು. ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಮತ್ತು ನಂತರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕ ಗೆದ್ದರು. ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

Published on: Aug 15, 2024 02:53 PM