AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Bengaluru: ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಪ್ರಮುಖ ರಸ್ತೆಗಳಲ್ಲಿ ಸಂಚಾರ ಸ್ಥಗಿತ

PM Modi in Bengaluru: ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಪ್ರಮುಖ ರಸ್ತೆಗಳಲ್ಲಿ ಸಂಚಾರ ಸ್ಥಗಿತ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Nov 11, 2022 | 10:52 AM

Share

ನಗರದಲ್ಲಿಂದು ಪ್ರಧಾನಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಹಲವಾರು ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು:  ಮೋಡ ಮುಸುಕಿದ ವಾತಾವರಣ (overcast weather) ಮತ್ತು ಜಿನುಗು ಮಳೆಗಳ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿಂದು ಪ್ರಧಾನಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಹಲವಾರು ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು (traffic movement) ಸ್ಥಗಿತಗೊಳಿಸಲಾಗಿದೆ. ನಗರದ ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಸರ್ಕಲ್, ಬಸವೇಶ್ವರ ಸರ್ಕಲ್, ಅರಮನೆ ಮೈದಾನ ರಸ್ತೆ, ರೇಸ್ ಕೋರ್ಸ್ ರೋಡ್, ಕ್ವೀನ್ಸ್ ರಸ್ತೆ, ರಾಜಭವನ್ ರಸ್ತೆ ಮತ್ತು ಶೇಷಾದ್ರಿ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿಷೇಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ನಿಷೇಧ ಜಾರಿಯಲ್ಲಿರುತ್ತದೆ.