Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Karnataka: ಸರಿಯಾಗಿ 11:55 ಕ್ಕೆ ಯಲಹಂಕದ ವಾಯುನೆಲೆ ನಿಲ್ದಾಣದಲ್ಲಿ ಲ್ಯಾಂಡ್ ಆದ ಪ್ರಧಾನಿ ನರೇಂದ್ರ ಮೋದಿ

PM Modi in Karnataka: ಸರಿಯಾಗಿ 11:55 ಕ್ಕೆ ಯಲಹಂಕದ ವಾಯುನೆಲೆ ನಿಲ್ದಾಣದಲ್ಲಿ ಲ್ಯಾಂಡ್ ಆದ ಪ್ರಧಾನಿ ನರೇಂದ್ರ ಮೋದಿ

TV9 Web
| Updated By: Digi Tech Desk

Updated on:Jun 20, 2022 | 1:30 PM

ಅದಾದ ಮೇಲೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಅವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಇಕಾನಾಮಿಕ್ಸ್ ಉದ್ಘಾಟನೆ, ಬಾಬಾ ಸಾಹೇಬರ ಪುತ್ಥಳಿ ಅನಾವರಣ ಮಾಡಿ ಕೆಂಗೇರಿ ಬಳಿಯ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಎರಡು ದಿನಗಳ ಕರ್ನಾಟಕ ಪ್ರವಾಸ ಅಂಗವಾಗಿ ಸೋಮವಾರ ಬೆಳಗ್ಗೆ ಸರಿಯಾಗಿ 11.55 ನಿಮಿಷಕ್ಕೆ ಯಲಹಂಕ ವಾಯುನೆಲೆ ನಿಲ್ದಾಣದಲ್ಲಿ (Yelahanka Airforce Base station) ಬಂದಿಳಿದರು. ಅವರನ್ನು ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಮತ್ತು ಅಧಿಕಾರಿಗಳು ಅಲ್ಲಿ ಹಾಜರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜನ ಸಃ ವಾಯು ನೆಲೆ ಬಳಿ ಜಮಾಯಿಸಿದ್ದರು. ಅಲ್ಲಿಂದ ಪ್ರಧಾನಿ ಮೋದಿಯವರು ಮಲ್ಲೇಶ್ವರಂನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳಿದರು. ಅದಾದ ಮೇಲೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಅವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಇಕಾನಾಮಿಕ್ಸ್ ಉದ್ಘಾಟನೆ, ಬಾಬಾ ಸಾಹೇಬರ ಪುತ್ಥಳಿ ಅನಾವರಣ ಮಾಡಿ ಕೆಂಗೇರಿ ಬಳಿಯ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 20, 2022 01:22 PM