PM Modi in Karnataka: ಪ್ರಧಾನಿ ಮೋದಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಿರುವ ಭಾರತದ ಮೊದಲ ಪ್ರಧಾನಿಯಾಗಲಿದ್ದಾರೆ

| Updated By: Digi Tech Desk

Updated on: Jun 20, 2022 | 11:32 AM

ದೇವಸ್ಥಾನದ ಪ್ರಧಾನ ಅರ್ಚಕರು ಶಶಿಶೇಖರ್ ದೀಕ್ಷಿತ್ ಮಾತಾಡಿ ಇದುವರೆಗೆ ರಾಜ್ಯಪಾಲರು, ನ್ಯಾಯಾಧೀಶರು, ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಬಂದು ಹೋಗಿದ್ದಾರೆ, ದೇಶದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಚಾಮುಂಡಿ ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ, ಎಂದು ಹೇಳಿದರು.

PM Modi Mysuru Visit: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಮೈಸೂರಿನ ಚಾಮುಂಡಿಬೆಟ್ಟದಲ್ಲಿ (Chamundi Hills) ನಾಡಿನ ಅಧಿದೇವತೆ ಚಾಮುಂಡಿದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿಗೆ (Chamundeshwari) ಪೂಜೆ ಸಲ್ಲಿಸಲಿರುವ ಭಾರತದ ಮೊದಲ ಪ್ರಧಾನಿ ಮೋದಿಯವರಾಗಲಿದ್ದಾರೆ. ಅವರ ಭೇಟಿಯ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯ ಬಳಿಕ ಭಕ್ತಾದಿಗಳು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಮುಜರಾಯಿ ತಹಸೀಲ್ದಾರ್ ಕೃಷ್ಣ ಟಿವಿ9 ಕನ್ನಡ ವಾಹಿನಿಯ ಮೈಸೂರು ಪ್ರತಿನಿಧಿ ರಾಮ್ ಅವರೊಂದಿಗೆ ಮಾತಾಡುತ್ತಾ ಪ್ರಧಾನಿಗಳ ಭದ್ರತಾ ವ್ಯವಸ್ಥೆಯನ್ನು ಎಸ್ ಪಿ ಜಿ ಮತ್ತು ಪೊಲೀಸರು ನೋಡಿಕೊಳ್ಳುತ್ತಾರೆ ಎಂದರು.

ಹಾಗೆಯೇ, ದೇವಸ್ಥಾನದ ಪ್ರಧಾನ ಅರ್ಚಕರು ಶಶಿಶೇಖರ್ ದೀಕ್ಷಿತ್ ಸಹ ಮಾತಾಡಿ ಇದುವರೆಗೆ ರಾಜ್ಯಪಾಲರು, ನ್ಯಾಯಾಧೀಶರು, ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಬಂದು ಹೋಗಿದ್ದಾರೆ, ದೇಶದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಚಾಮುಂಡಿ ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ, ಎಂದು ಹೇಳಿ ಮೋದಿಯವರ ಸಂಕಲ್ಪದ ಮೇರೆಗೆ ಪೂಜೆ ನೆರವೇರಿಸಲಾಗುವುದು ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 20, 2022 10:55 AM