PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

Updated on: Nov 28, 2025 | 12:54 PM

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣಗೊಳಿಸಿ, ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮೋದಿ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ವಿಡಿಯೋ ಇಲ್ಲಿದೆ.

ಉಡುಪಿ, ನವೆಂಬರ್ 28: ಉಡುಪಿಗೆ ಆಗಮಿಸಿ ಭರ್ಜರಿ ರೋಡ್​​ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣ ಮಾಡಿದ ಪ್ರಧಾನಿ ನಂತರ, ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ