PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು: ಪ್ರಧಾನಿ ಮೋದಿ

|

Updated on: Sep 22, 2024 | 11:25 PM

ಅಮೆರಿಕದ ನ್ಯೂಯಾರ್ಕ್​ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಶಕ್ತಿ ಮತ್ತು ಕನಸುಗಳಿಂದ ತುಂಬಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಭಾರತ ಅವಕಾಶಗಳನ್ನು ಸೃಷ್ಟಿಸುತ್ತದೆ. ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದು ಹೇಳಿದ್ದಾರೆ.

ಅಮೆರಿಕ, ಸೆಪ್ಟೆಂಬರ್​ 22: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದಾಗಿದೆ. ಇದು ಕೇವಲ ಎರಡು ವರ್ಷಗಳಲ್ಲಿ ಸಾಧ್ಯವಾಗಿದೆ. ಈಗ ಭಾರತವು ಮೇಡ್-ಇನ್-ಇಂಡಿಯಾ 6G ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ನ್ಯೂಯಾರ್ಕ್​ನಲ್ಲಿ ಮಾತನಾಡಿದರು. ಶೀಘ್ರದಲ್ಲೇ ಮೇಡ್ ಇನ್ ಇಂಡಿಯಾ ಚಿಪ್​ ತಯಾರಿಕೆಯನ್ನು ಭಾತರದಲ್ಲಿ ಕಾಣುತ್ತಿರಿ. ಇಂದು ಪ್ರಪಂಚದ ದೊಡ್ಡ ದೊಡ್ಡ ಬ್ರಾಂಡ್ ಮೊಬೈಲ್‌ಗಳು ಭಾರತದಲ್ಲಿಯೇ ತಯಾರಿಸಲ್ಪಡುತ್ತವೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ತಯಾರಿಕಾ ದೇಶವಾಗಿದೆ. ಭಾರತವು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.