Narendra modi: ದೇವನಹಳ್ಳಿ ಏರ್​ಪೋರ್ಟ್​ನಲ್ಲಿ ಹೊಸ ಟರ್ಮಿನಲ್-2 ಲೋಕಾರ್ಪಣೆ

| Updated By: ಅಕ್ಷತಾ ವರ್ಕಾಡಿ

Updated on: Nov 11, 2022 | 12:10 PM

ಟರ್ಮಿನಲ್ 2 ಅನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ. ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ.

ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಈ ಹಿನ್ನೆಲೆ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಅಧಿಕ‌ ಜನರಿಗೆ ಅಡುಗೆ ಸಿದ್ದತೆಗೊಂಡಿದೆ.