ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು ಇಡೀ ದೇಶ ನೋಡುತ್ತಿದೆ” ಎಂದು ಹೇಳಿದ್ದಾರೆ.
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ