ಇದು ಕೇವಲ ರೈಲು ಮಾರ್ಗವಲ್ಲ, ಬದಲಾವಣೆಯ ಜೀವನಾಡಿ: ಮಿಜೋರಾಂ ರೈಲು ಮಾರ್ಗ ಲೋಕಾರ್ಪಣೆಗೊಳಿಸಿ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂನಿಂದ ಎರಡು ದಿನಗಳ ಈಶಾನ್ಯ ರಾಜ್ಯಗಳ ಪ್ರವಾಸ ಆರಂಭಿಸಿದ್ದಾರೆ. ರಾಜಧಾನಿ ಐಜ್ವಾಲ್‌ನಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಅವರು ವಿಮಾನ ನಿಲ್ದಾಣದಿಂದಲೇ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಯದಲ್ಲಿ ಅವರು ಮಿಜೋರಾಂ ರೈಲ್ವೆ ಜಾಲವನ್ನು ಸಹ ಉದ್ಘಾಟಿಸಿದರು. ಮೋದಿ ಕಾರ್ಯಕ್ರಮದ ವಿಡಿಯೋ ಇಲ್ಲಿದೆ.
ನವದೆಹಲಿ, ಸೆಪ್ಟೆಂಬರ್ 13: ಎರಡು ದಿನಗಳ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ರೈಲ್ವೆ ಜಾಲದೊಂದಿಗೆ ಸಂಪರ್ಕಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು ಉದ್ಘಾಟಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ ಮಿಜೋರಾಂ ರೈಲು ಜಾಲದ ಮೂಲಕ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ ಹೊಂದಿದಂತಾಗಿದೆ. ಮಿಜೋರಾಂನಿಂದ ದೆಹಲಿಗೆ ನೇರ ರೈಲು ಕೂಡ ಆರಂಭವಾಗಿದೆ. ಮೋದಿ ಅವರು ಐಜ್ವಾಲ್‌ನಲ್ಲಿ ಒಟ್ಟು 9000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಕೆಲವು ಯೋಜನೆಗಳ ಉದ್ಘಾಟನೆ ನೆರವೇರಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ