ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Updated on: Oct 08, 2025 | 3:55 PM

ಈ ಹೊಸ ವಿಮಾನ ನಿಲ್ದಾಣವು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ. ಸುಮಾರು 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರೀನ್‌ಫೀಲ್ಡ್ ಯೋಜನೆಯಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (NMIA) ವಿಶ್ವದ ಗಮನ ಸೆಳೆಯಲಿದೆ. 1,160 ಹೆಕ್ಟೇರ್‌ಗಳಲ್ಲಿ ಹರಡಿರುವ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಮುಂಬೈನ ಸದ್ಯದ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.

ಮುಂಬೈ, ಅಕ್ಟೋಬರ್ 8: ಪ್ರಧಾನ ಮಂತ್ರಿ ಮೋದಿ (PM Narendra Modi) ಅವರು ಇಂದು (ಬುಧವಾರ) ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Navi Mumbai International Airport) 1ನೇ ಹಂತವನ್ನು ಉದ್ಘಾಟಿಸಿದ್ದಾರೆ. ಈ ವೇಳೆ ಮೋದಿ ಅವರು ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಓಡಾಡಿದರು. ಈ ಹೊಸ ವಿಮಾನ ನಿಲ್ದಾಣವು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ. ಸುಮಾರು 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರೀನ್‌ಫೀಲ್ಡ್ ಯೋಜನೆಯಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (NMIA) ವಿಶ್ವದ ಗಮನ ಸೆಳೆಯಲಿದೆ. 1,160 ಹೆಕ್ಟೇರ್‌ಗಳಲ್ಲಿ ಹರಡಿರುವ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಮುಂಬೈನ ಸದ್ಯದ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 08, 2025 03:54 PM