ಪ್ರಧಾನಿ ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!

Updated on: Jul 26, 2025 | 10:11 PM

ಈ ಹೊಸ ಟರ್ಮಿನಲ್ ಕಟ್ಟಡವನ್ನು ತಮಿಳುನಾಡು ರಾಜ್ಯದ ಅಭಿವೃದ್ಧಿಯಲ್ಲಿ ಒಂದು "ದೊಡ್ಡ ಹೆಜ್ಜೆ" ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಹಿಂದಿನ 3 ಲಕ್ಷಕ್ಕೆ ಹೋಲಿಸಿದರೆ ಈ ಹೊಸ ಟರ್ಮಿಲ್​​​ನಲ್ಲಿ ವಾರ್ಷಿಕವಾಗಿ 20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ. 17,340 ಚದರ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್ ಅನ್ನು 1,350 ಪ್ರಯಾಣಿಕರನ್ನು ಮತ್ತು ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ.

ತೂತುಕುಡಿ, ಜುಲೈ 26: ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತೂತುಕುಡಿ ವಿಮಾನ ನಿಲ್ದಾಣದ (Thoothukudi Airport New Terminal) ಹೊಸ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದ್ದಾರೆ. ಈ ಟರ್ಮಿನಲ್ ಅನ್ನು 450 ಕೋಟಿ ರೂ.ಗಳ ವೆಚ್ಚದಲ್ಲಿ ನರ್ಮಿಸಲಾಗಿದೆ. ಈ ಹೊಸ ಟರ್ಮಿನಲ್ ಕಟ್ಟಡವನ್ನು ತಮಿಳುನಾಡು ರಾಜ್ಯದ ಅಭಿವೃದ್ಧಿಯಲ್ಲಿ ಒಂದು “ದೊಡ್ಡ ಹೆಜ್ಜೆ” ಎಂದು ಪ್ರಧಾನಿ ಮೋದಿ (PM Modi in Tamil Nadu) ಶ್ಲಾಘಿಸಿದ್ದಾರೆ. ಹಿಂದಿನ 3 ಲಕ್ಷಕ್ಕೆ ಹೋಲಿಸಿದರೆ ಈ ಹೊಸ ಟರ್ಮಿಲ್​​​ನಲ್ಲಿ ವಾರ್ಷಿಕವಾಗಿ 20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ. 17,340 ಚದರ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್ ಅನ್ನು 1,350 ಪ್ರಯಾಣಿಕರನ್ನು ಮತ್ತು ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. 100% ಎಲ್ಇಡಿ ದೀಪಗಳು, ಇಂಧನ-ಸಮರ್ಥ ವಿದ್ಯುತ್ ಮತ್ತು ಯಾಂತ್ರಿಕ ವ್ಯವಸ್ಥೆಗಳು ಮತ್ತು ಆನ್-ಸೈಟ್ ಒಳಚರಂಡಿ ಸಂಸ್ಕರಣಾ ಘಟಕದ ಮೂಲಕ ಸಂಸ್ಕರಿಸಿದ ನೀರಿನ ಮರುಬಳಕೆಯನ್ನು ಒಳಗೊಂಡಿರುವ ಟರ್ಮಿನಲ್ ಅನ್ನು GRIHA-4 ಸುಸ್ಥಿರತೆ ರೇಟಿಂಗ್ ಸಾಧಿಸಲು ನಿರ್ಮಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More