PM Modi in Adichunchanagiri: ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

Updated on: Apr 15, 2026 | 12:32 PM

ಕೊನೆಗೂ ಭಕ್ತರು ಕಾದು ಕುಳಿತಿದ್ದ ಕ್ಷಣ ಬಂದೇ ಬಿಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ, ಏಪ್ರಿಲ್ 15: ಕೊನೆಗೂ ಭಕ್ತರು ಕಾದು ಕುಳಿತಿದ್ದ ಕ್ಷಣ ಬಂದೇ ಬಿಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ 80 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ಮೂಡಿಬಂದಿದೆ. ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Apr 15, 2026 12:03 PM
Follow Us