New Parliament Inauguration: ಲೋಕಸಭೆಯ ಸ್ಪೀಕರ್ ಆಸನದ ಬಳಿ ಸೆಂಗೋಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಸ್ಪೀಕರ್ ಆಸನದ ಬಳಿ ಸೆಂಗೋಲ್ ಪ್ರತಿಷ್ಠಾಪಿಸಿದ್ದಾರೆ.
ನವದೆಹಲಿ: ದೆಹಲಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಪುರೋಹಿತರಿಂದ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಾಥ್ ನೀಡಿದ್ದಾರೆ.