ಚಹಾ, ಅಪ್ಪುಗೆ, ಶೇಕ್ ಹ್ಯಾಂಡ್, ನಗು; ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ

Updated on: May 24, 2025 | 7:25 PM

ಪುದುಚೇರಿ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳು ಮಾತ್ರ ನೀತಿ ಆಯೋಗದ ಸಭೆಯಲ್ಲಿ ಗೈರುಹಾಜರಾಗಿದ್ದರು. ಉಳಿದೆಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಈ ವೇಳೆ ಪಕ್ಷಭೇದ ಮರೆತು ಎಲ್ಲ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಬಹಳ ಆತ್ಮೀಯತೆಯಿಂದ ಚಹಾ ಹೀರುತ್ತಾ, ಕೈ ಕುಲುಕುತ್ತಾ, ಪರಸ್ಪರ ಅಪ್ಪಿಕೊಂಡು ಮಾತುಕತೆ ನಡೆಸಿದ್ದಾರೆ.

ನವದೆಹಲಿ, ಮೇ 24: ಆಪರೇಷನ್ ಸಿಂಧೂರ್ ಮತ್ತು ಪಾಕಿಸ್ತಾನದೊಂದಿಗಿನ ಭಾರತದ ಉದ್ವಿಗ್ನತೆಯ ನಂತರ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ನೀತಿ ಆಯೋಗದ ಸಭೆ ನಡೆಸಿದ್ದಾರೆ. ಈ ವೇಳೆ ಪುದುಚೇರಿ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳು ಮಾತ್ರ ನೀತಿ ಆಯೋಗದ ಸಭೆಯಲ್ಲಿ ಗೈರುಹಾಜರಾಗಿದ್ದರು. ಉಳಿದೆಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಈ ವೇಳೆ ಪಕ್ಷಭೇದ ಮರೆತು ಎಲ್ಲ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಬಹಳ ಆತ್ಮೀಯತೆಯಿಂದ ಚಹಾ ಹೀರುತ್ತಾ, ಕೈ ಕುಲುಕುತ್ತಾ, ಪರಸ್ಪರ ಅಪ್ಪಿಕೊಂಡು ಮಾತುಕತೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: May 24, 2025 07:25 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More