ಪ್ಯಾರಾಲಿಂಪಿಕ್ ಅಥ್ಲೀಟ್‌ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ
Tokyo Paralympics: ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯವಾಗಿದೆ. ಇದೀಗ ಪ್ಯಾರಾಲಿಂಪಿಕ್ ಸರದಿಯಾಗಿದ್ದು, ಅದೇ ಪ್ಯಾರಿಸ್ನಲ್ಲಿ ಆಗಸ್ಟ್ 28 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 8 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದಿಂದಲೂ ಪ್ಯಾರಾಲಿಂಪಿಕ್ ಅಥ್ಲೀಟ್ಗಳು ಭಾಗವಹಿಸುತ್ತಿದ್ದು, ಈ ಕ್ರೀಡಾಪಟುಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.
ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯವಾಗಿದೆ. ಇದೀಗ ಪ್ಯಾರಾಲಿಂಪಿಕ್ ಸರದಿಯಾಗಿದ್ದು, ಅದೇ ಪ್ಯಾರಿಸ್ನಲ್ಲಿ ಆಗಸ್ಟ್ 28 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 8 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದಿಂದಲೂ ಪ್ಯಾರಾಲಿಂಪಿಕ್ ಅಥ್ಲೀಟ್ಗಳು ಭಾಗವಹಿಸುತ್ತಿದ್ದು, ಈ ಕ್ರೀಡಾಪಟುಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು. ವಾಸ್ತವವಾಗಿ ಕಳೆದ ಪ್ಯಾರಾಲಿಂಪಿಕ್ಸ್ ಭಾರತಕ್ಕೆ ಬಹಳ ವಿಶೇಷವಾಗಿತ್ತು. ಏಕೆಂದರೆ ಭಾರತದ ಪ್ಯಾರಾಲಿಂಪಿಯನ್‌ಗಳು ಆ ಆವೃತ್ತಿಯಲ್ಲಿ 5 ಚಿನ್ನ, 8 ಬೆಳ್ಳಿ ಮತ್ತು 6 ಕಂಚು ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗಿನ ದೇಶದ ಅತ್ಯುತ್ತಮ ಪ್ರದರ್ಶನವಾಗಿತ್ತು. ಈ ಕಾರಣದಿಂದಾಗಿ ಭಾರತವು ಪದಕ ಪಟ್ಟಿಯಲ್ಲಿ 24 ನೇ ಸ್ಥಾನ ಪಡೆದಿತ್ತು.
ಇದೀಗ ಪ್ಯಾರಾಲಿಂಪಿಕ್ನಲ್ಲಿ ಸ್ಪರ್ಧಿಸಲಿರುವ ಭಾರತದ ಅಥ್ಲೀಟ್‌ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ವೇಳೆ ಪ್ಯಾರಾ ಶೂಟರ್ ಅವನಿ ಲೆಖರಾ ಅವರೊಂದಿಗೆ ಮಾತನಾಡಿದರು. ಕಳೆದ ಪ್ಯಾರಾಲಿಂಪಿಕ್ಸ್‌ನಲ್ಲಿ 1 ಚಿನ್ನ ಸೇರಿದಂತೆ 2 ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದೀರಿ. ಈ ಬಾರಿ ನಿಮ್ಮ ಗುರಿ ಏನು? ಎಂದು ಪ್ರಧಾನಿ ಮೋದಿ, ಲೆಖರಾ ಬಳಿ ಕೇಳಿದರು. ಅದಕ್ಕೆ ಉತ್ತರಿಸಿದ ಅವನಿ ಲೆಖರಾ, ‘ಕಳೆದ ಬಾರಿ ಅದು ನನ್ನ ಮೊದಲ ಪ್ಯಾರಾಲಿಂಪಿಕ್ ಕ್ರೀಡಾಕೂಟವಾಗಿತ್ತು. ಹಾಗಾಗಿ 4 ಈವೆಂಟ್ಗಳಲ್ಲಿ ಭಾಗವಹಿಸಿ ಅನುಭವ ಪಡೆದಿದ್ದೆ. ಈ ಪ್ಯಾರಾಲಿಂಪಿಕ್ಸ್‌ನಲ್ಲಿ ನಾನು ಕ್ರೀಡೆಯಲ್ಲಿ ಪ್ರಬುದ್ಧತೆಯನ್ನು ಗಳಿಸಿದ್ದೇನೆ. ನಾನು ಭಾಗವಹಿಸುವ ಯಾವುದೇ ಸ್ಪರ್ಧೆಗಳಲ್ಲಿ ನನ್ನ ಅತ್ಯುತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ. ನನಗೆ ಇಡೀ ಭಾರತದ ಬೆಂಬಲ ಮತ್ತು ಪ್ರೀತಿ ಸಿಕ್ಕಿದೆ ಎಂದರು.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
