ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ

Updated on: Jan 17, 2026 | 3:37 PM

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಇದು ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ತಾಂತ್ರಿಕವಾಗಿ ಅಪ್​ಗ್ರೇಡ್ ಆದ ಪ್ರಯಾಣದ ಅನುಭವವನ್ನು ನೀಡುತ್ತದೆ.

ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ ಭಾಗಿಯಾಗಿರುವ ರೈಲ್ವೆ ಸಿಬ್ಬಂದಿಯ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಂದೇ ಭಾರತ್ ಸ್ಲೀಪರ್ ರೈಲು ಭಾರತದಲ್ಲಿ ದೀರ್ಘ ಪ್ರಯಾಣವನ್ನು ಹೆಚ್ಚು ಆರಾಮದಾಯಕ, ಅದ್ಭುತ ಮತ್ತು ಸ್ಮರಣೀಯವಾಗಿಸುತ್ತದೆ ಎಂದು ಹೇಳಿದರು. “ಇಂದು ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮಾಲ್ಡಾದಿಂದ ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ