PM Narendra Modi Kalaburagi Yadgir Visit: ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾರ್ಯಕ್ರಮ ಆಯೋಜಿಸಲಾಗಿದ್ದು, ನೆಚ್ಚಿನ ನಾಯಕನನ್ನು ನೋಡಲು ಜನಸಾಗರವೇ ಹರಿದುಬರುತ್ತಿದೆ. ಸುಮಾರು ಆರವತ್ತು ಎಕರೆ ವಿಸ್ತೀರ್ಣದಲ್ಲಿ ವೇದಿಕೆ ನಿರ್ಮಾಣವಾಗಿದ್ದು, ವೇದಿಕೆ ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಮೋದಿ ಕಾರ್ಯಕ್ರಮಕ್ಕೆ ಬರುವ ಜನರಿಗಾಗಿ ಭರ್ಜರಿ ಊಟ, ತಿಂಡಿಯನ್ನೂ ಸಹಾ ರೆಡಿ ಮಾಡಲಾಗಿದೆ. ಸುಮಾರು 3 ಲಕ್ಷ ಜನರಿಗೆ ಪಲಾವ್, ಮೊಸರನ್ನ, ಪಾಯಸ ಸಿದ್ಧಗೊಳಿಸಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ