ಸೌದಿ ಅರೇಬಿಯಾದ ಜೆಡ್ಡಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ

Updated on: Apr 22, 2025 | 4:30 PM

ಸೌದಿ ಅರೇಬಿಯಾಕ್ಕೆ ಎರಡು ದಿನಗಳ ರಾಜ್ಯ ಭೇಟಿಗಾಗಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಜೆಡ್ಡಾಗೆ ತಲುಪಿದ್ದಾರೆ. ಅಲ್ಲಿ ಅವರನ್ನು 21 ಗನ್ ಸಲ್ಯೂಟ್​​ಗಳೊಂದಿಗೆ ಸ್ವಾಗತಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಎಚ್‌ಆರ್‌ಎಚ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಸೌದಿ ಅರೇಬಿಯಾ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ 2ನೇ ನಾಯಕರ ಸಭೆಯ ಸಹ ಅಧ್ಯಕ್ಷತೆ ವಹಿಸಲಿದ್ದಾರೆ.

ಜೆಡ್ಡಾ, ಏಪ್ರಿಲ್ 22: ಪ್ರಧಾನಿ ನರೇಂದ್ರ ಮೋದಿ ಇಂದು ಸೌದಿ ಅರೇಬಿಯಾದ (Saudi Arabia) ಜೆಡ್ಡಾಗೆ ತಲುಪಿದ್ದಾರೆ. ಅವರನ್ನು 21 ಗನ್ ಸಲ್ಯೂಟ್​ನೊಂದಿಗೆ ಸ್ವಾಗತಿಸಲಾಯಿತು. ಪ್ರಧಾನಿ ಮೋದಿ (PM Narendra Modi) ಏಪ್ರಿಲ್ 23ರವರೆಗೆ ಸೌದಿ ಅರೇಬಿಯಾದಲ್ಲಿ ಇರಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿಯವರ 2019ರ ಭೇಟಿಯ ಸಮಯದಲ್ಲಿ ಸ್ಥಾಪಿಸಲಾದ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಎರಡನೇ ಸಭೆಗೆ ಪ್ರಧಾನಿ ಮೋದಿ ಮತ್ತು ಕ್ರೌನ್ ಪ್ರಿನ್ಸ್ ಜಂಟಿಯಾಗಿ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 22, 2025 04:30 PM
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More