2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಘಾನಾ ಭೇಟಿಯನ್ನು ಮುಗಿಸಿದ ನಂತರ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ್ದಾರೆ. 5 ರಾಷ್ಟ್ರಗಳ ಪ್ರವಾಸದ ಮೊದಲ ಹಂತವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಘಾನಾದ ರಾಜಧಾನಿ ಅಕ್ರಾದಿಂದ ನಿರ್ಗಮಿಸಿದ್ದಾರೆ. ಜುಲೈ 3ರಿಂದ ಜುಲೈ 4ರವರೆಗೆ ನಿಗದಿಯಾಗಿರುವ ತಮ್ಮ ಎರಡನೇ ಹಂತದ ಭೇಟಿಗಾಗಿ ಅವರು ಈಗ ಟ್ರಿನಿಡಾಡ್ ಮತ್ತು ಟೊಬೆಗೊಗೆ ಪ್ರಯಾಣಿಸಲಿದ್ದಾರೆ. ಇದು ಪಶ್ಚಿಮ ಆಫ್ರಿಕಾದ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಮತ್ತು ಮೂರು ದಶಕಗಳಲ್ಲಿ ಘಾನಾಗೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿಯಾಗಿದೆ.
ನವದೆಹಲಿ, ಜುಲೈ 3: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘಾನಾಗೆ ತಮ್ಮ ಎರಡು ದಿನಗಳ ಭೇಟಿಯನ್ನು ಮುಗಿಸಿದ ನಂತರ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದರು. “ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳುತ್ತಿದ್ದೇನೆ. ಇಂದು ಸಂಜೆ ನಂತರ, ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ. ನಾಳೆ ನಾನು ಟ್ರಿನಿಡಾಡ್ ಮತ್ತು ಟೊಬೆಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಮೋದಿ ಎಕ್ಸ್ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ ಭಾರತೀಯ ಪ್ರಧಾನಿಯೊಬ್ಬರು ಘಾನಾಗೆ ನೀಡಿದ ಮೊದಲ ಭೇಟಿ ಇದಾಗಿದೆ.
ಜುಲೈ 3ರಿಂದ ಜುಲೈ 4ರವರೆಗೆ ನಿಗದಿಯಾಗಿರುವ ತಮ್ಮ ಎರಡನೇ ಹಂತದ ಭೇಟಿಗಾಗಿ ಅವರು ಈಗ ಟ್ರಿನಿಡಾಡ್ ಮತ್ತು ಟೊಬೆಗೊಗೆ ಪ್ರಯಾಣಿಸಲಿದ್ದಾರೆ. ಇದು ಪಶ್ಚಿಮ ಆಫ್ರಿಕಾದ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಮತ್ತು 3 ದಶಕಗಳಲ್ಲಿ ಘಾನಾಗೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಘಾನಾ ಭೇಟಿಯ ಹೈಲೈಟ್ಸ್ ಇಲ್ಲಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ