ವಿಮಾನ ನಿಲ್ದಾಣಕ್ಕೆ ಬಂದು ಪ್ರಧಾನಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್

|

Updated on: Feb 12, 2025 | 8:50 PM

ಫ್ರಾನ್ಸ್​ ಪ್ರವಾಸ ಮುಗಿಸಿ ಹೊರಟ ಪ್ರಧಾನಿ ನರೇಂದ್ರ ಮೋದಿಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರನ್ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಪ್ರಧಾನಿ ಮೋದಿ ಇಂದು ಫ್ರಾನ್ಸ್​ನ ಮಾರ್ಷಿಲ್ಲೆಯಿಂದ ವಾಷಿಂಗ್ಟನ್‌ಗೆ ವಿಮಾನದ ಮೂಲಕ ತೆರಳಿದ್ದಾರೆ. ಈ ವೇಳೆ ಅವರನ್ನು ಬೀಳ್ಕೊಡಲು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮಾರ್ಷಿಲ್ಲೆ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಮೂರು ದಿನಗಳ ಐತಿಹಾಸಿಕ ಫ್ರಾನ್ಸ್ ಭೇಟಿಯನ್ನು ಮುಕ್ತಾಯಗೊಳಿಸಿದ್ದಾರೆ. ಮೋದಿಯವರೊಂದಿಗಿನ ಆತ್ಮೀಯ ಸಂಬಂಧದ ಸೂಚಕವಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಬೀಳ್ಕೊಡುಗೆ ನೀಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಂಡರು.

ಪ್ರಧಾನಿ ಮೋದಿ ಇಂದು ಫ್ರಾನ್ಸ್​ನ ಮಾರ್ಷಿಲ್ಲೆಯಿಂದ ವಾಷಿಂಗ್ಟನ್‌ಗೆ ವಿಮಾನದ ಮೂಲಕ ತೆರಳಿದ್ದಾರೆ. ಈ ವೇಳೆ ಅವರನ್ನು ಬೀಳ್ಕೊಡಲು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮಾರ್ಷಿಲ್ಲೆ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಇದು ಎರಡೂ ರಾಷ್ಟ್ರಗಳ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧಗಳನ್ನು ಒತ್ತಿಹೇಳಿತು. ಪ್ರಧಾನಿ ಮೋದಿ ತಮ್ಮ ಎರಡು ರಾಷ್ಟ್ರಗಳ ಭೇಟಿಯ ಎರಡನೇ ಹಂತಕ್ಕಾಗಿ ಫ್ರಾನ್ಸ್‌ನ ಮಾರ್ಷಿಲ್ಲೆಯಿಂದ ವಾಷಿಂಗ್ಟನ್ ಡಿಸಿಗೆ ತೆರಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ