AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶ್ರೀರಾಮ್ ಕಾಲೇಜಿನ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ವಿಶೇಷ ನಾಣ್ಯ ಬಿಡುಗಡೆ

ದೆಹಲಿ ಶ್ರೀರಾಮ್ ಕಾಲೇಜಿನ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ವಿಶೇಷ ನಾಣ್ಯ ಬಿಡುಗಡೆ

ಸುಷ್ಮಾ ಚಕ್ರೆ
|

Updated on: Sep 05, 2026 | 7:54 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿ ವಿಶ್ವವಿದ್ಯಾಲಯದ ಪ್ರತಿಷ್ಠಿತ 'ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್' ಸಂಸ್ಥೆಯ ನೂರನೇ ವರ್ಷದ ಆಚರಣೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದರು. ಶತಾಬ್ದಿ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಿ, ಗೌರವಿಸಿದರು.

ನವದೆಹಲಿ, ಸೆಪ್ಟೆಂಬರ್ 5: ದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ (ಎಸ್​ಆರ್​ಸಿಸಿ) ಸಂಸ್ಥೆಯ ಶತಮಾನೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಿದ್ದರು. ಸಾಂಪ್ರದಾಯಿಕ ದೀಪ ಬೆಳಗಿಸುವ ಮೂಲಕ ಪ್ರಧಾನಿ ಮೋದಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಐತಿಹಾಸಿಕ ಮೈಲಿಗಲ್ಲಿನ ನೆನಪಿಗಾಗಿ ಅವರು ವಿಶೇಷ ಸಂಸ್ಮರಣಾ ನಾಣ್ಯವನ್ನು ಬಿಡುಗಡೆ ಮಾಡಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಲು ಪ್ರಧಾನಿ ಮೋದಿ ದೆಹಲಿ ಮೆಟ್ರೋ ಮಾರ್ಗವನ್ನು ಆಯ್ಕೆ ಮಾಡಿಕೊಂಡು, ಪ್ರಯಾಣದ ವೇಳೆ ಯುವಜನತೆ ಹಾಗೂ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಸಭೆಗೆ ಆಗಮಿಸಿದ್ದು ವಿಶೇಷವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us