ಸ್ಮರಣೀಯ ಉಡುಗೊರೆಗಳೊಂದಿಗೆ ಪ್ರಧಾನಿ ಮೋದಿ ಭೇಟಿಯಾದ ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳು; ವಿಡಿಯೋ ನೋಡಿ
Paralympics 2024: ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ ಐತಿಹಾಸಿಕ ಪ್ರದರ್ಶನ ತೋರಿದ್ದ ಭಾರತದ ಪ್ಯಾರಾ ಅಥ್ಲೀಟ್‌ಗಳು ದಾಖಲೆಯ 29 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು. ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಇಷ್ಟು ಪದಕಗಳನ್ನು ಗೆದ್ದಿದ್ದು ಇದೇ ಮೊದಲು. ಹೀಗಾಗಿ ದೇಶದ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿದ ಭಾರತದ ಪ್ಯಾರಾ ಅಥ್ಲೀಟ್‌ಗಳನ್ನು ಪ್ರಧಾನಿ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ ಐತಿಹಾಸಿಕ ಪ್ರದರ್ಶನ ತೋರಿದ್ದ ಭಾರತದ ಪ್ಯಾರಾ ಅಥ್ಲೀಟ್‌ಗಳು ದಾಖಲೆಯ 29 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು. ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಇಷ್ಟು ಪದಕಗಳನ್ನು ಗೆದ್ದಿದ್ದು ಇದೇ ಮೊದಲು. ಹೀಗಾಗಿ ದೇಶದ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿದ ಭಾರತದ ಪ್ಯಾರಾ ಅಥ್ಲೀಟ್‌ಗಳನ್ನು ಪ್ರಧಾನಿ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಪ್ರಧಾನಿ ಮೋದಿ ಅವರು ಪ್ರತಿಯೊಬ್ಬ ಪ್ಯಾರಾ ಅಥ್ಲೀಟ್ಗಳೊಂದಿಗೆ ಮಾತನಾಡಿ, ಕ್ರೀಡಾಕೂಟದಲ್ಲಿ ಆದ ಅನುಭವಗಳನ್ನು ತಿಳಿದುಕೊಂಡರು. ಈ ವೇಳೆ ಅಥ್ಲೀಟ್‌ಗಳು ಪ್ರಧಾನಿಯವರಿಗೆ ವಿಶೇಷ ಉಡುಗೊರೆಗಳನ್ನು ನೀಡಿದರು. ಹಾಗೆಯೇ ಪ್ರಧಾನಿ ಮೋದಿ ಕೂಡ ಸ್ಪರ್ಧಿಗಳು ಗೆದ್ದ ಪದಕದ ಮೇಲೆ ತಮ್ಮ ಸಹಿ ಕೂಡ ಹಾಕಿದರು.
ಇನ್ನು ಈ ಬಾರಿಯ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದುಕೊಂಡಿತು. ಈ ಮೂಲಕ ಪ್ಯಾರಾಲಿಂಪಿಕ್ ಪದಕಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಟಾಪ್-20 ರಲ್ಲಿ ಸ್ಥಾನ ಪಡೆದುಕೊಂಡಿದ್ದು, 18 ನೇ ಸ್ಥಾನ ಪಡೆಯುವ ಮೂಲಕ ಕ್ರೀಡಾಕೂಟಕ್ಕೆ ವಿದಾಯ ಹೇಳಿತ್ತು.
2 ದಿನಗಳ ಹಿಂದೆ ಕ್ರೀಡಾ ಸಚಿವಾಲಯವು ಪ್ಯಾರಾಲಿಂಪಿಕ್ಸ್‌ನ ಪದಕ ವಿಜೇತರನ್ನು ಗೌರವಿಸಿತ್ತು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ಚಿನ್ನದ ಪದಕ ಗೆದ್ದ ಆಟಗಾರರಿಗೆ 75 ಲಕ್ಷ ರೂಪಾಯಿ, ಬೆಳ್ಳಿ ಗೆದ್ದವರಿಗೆ 50 ಲಕ್ಷ ರೂಪಾಯಿ ಮತ್ತು ಕಂಚು ಗೆದ್ದ ಪ್ಯಾರಾ ಆಟಗಾರರಿಗೆ 30 ಲಕ್ಷ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಿದರು. ಮಿಶ್ರ ತಂಡ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿಲ್ಲುಗಾರ್ತಿ ಶೀತಲ್ ದೇವಿ ಅವರಿಗೆ ಹೆಚ್ಚುವರಿಯಾಗಿ 22.5 ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸಿದರು.