ಮೈಸೂರಿಗೆ ಆಗಮಿಸುವ ಪ್ರಧಾನಿಗೆ ಬಿಜೆಪಿಯಿಂದ ರಾಮ, ಸೀತೆ ಮೂರ್ತಿ ಉಡುಗೊರೆ

Edited By: ವಿವೇಕ ಬಿರಾದಾರ

Updated on: Apr 14, 2024 | 12:41 PM

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏ.13) ಮೈಸೂರಿಗೆ ಆಗಮಿಸಲಿದ್ದು, ಸಂಜೆ 4:30 ರಿಂದ 5:20ರವರೆಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ. ಮೋದಿಯವರಿಗೆ ಮೈಸೂರು ಬಿಜೆಪಿ ಘಟಕ ವಿಶೇಷ ಉಡುಗೊರೆ ನೀಡಲು ಸಿದ್ದತೆ ಮಾಡಿಕೊಂಡಿದೆ.

ಮೈಸೂರು, ಏಪ್ರಿಲ್​ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.13) ಮೈಸೂರಿಗೆ ಆಗಮಿಸಲಿದ್ದು, ಸಂಜೆ 4:30 ರಿಂದ 5:20ರವರೆಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ. ಮೋದಿಯವರಿಗೆ ಮೈಸೂರು (Mysore) ಬಿಜೆಪಿ (BJP) ಘಟಕ ವಿಶೇಷ ಉಡುಗೊರೆ ನೀಡಲು ಸಿದ್ದತೆ ಮಾಡಿಕೊಂಡಿದೆ. ಮರದಲ್ಲಿ ಕೆತ್ತಿರುವ ರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೇಯ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಈ ಮೂರ್ತಿ ಸುಮಾರು ಎರಡು ಅಡಿ ಎತ್ತರ ಇದೆ. ಮೂರ್ತಿ ಜೊತೆಗೆ ಮೈಸೂರು ಪೇಟ, ರೇಷ್ಮೆ ಶಲ್ಯ, ಹಾರ ಹಾಕಿ ಸನ್ಮಾನಿಸಲಾಗುತ್ತದೆ. ರಾಮರಾಜ್ಯ ನಿರ್ಮಾಣದ ಕಲ್ಪನೆಯಲ್ಲಿರುವ ನರೇಂದ್ರ ಮೋದಿ ಅವರಿಗೆ ರಾಮನ ಮೂರ್ತಿ ನೀಡಿ ಗೌರವಿಸುತ್ತಿದ್ದೇವೆ. ಅವರು ಮೈಸೂರು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು ನಮಗೆ ಮತ್ತಷ್ಟು ಬೂಸ್ಟ್ ನೀಡಿದೆ. ಜನ ಈ ಬಾರಿಯೂ ಮತ್ತೊಮ್ಮೆ ಮೋದಿ ಎನ್ನುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಉಪಾಧ್ಯಕ್ಷ ರಾಜೇಂದ್ರ ಹೇಳಿದರು.

Published on: Apr 14, 2024 12:38 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More