ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣಪತಿ ದರ್ಶನ ಪಡೆದರು. ಈ ವೇಳೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಮಂಗಳಾರತಿ ಬೆಳಗಿ ದೇಶದ ಜನರ ಕ್ಷೇಮಾಭಿವೃದ್ಧಿಗಾಗಿ ವಿಘ್ನವಿನಾಶಕನಲ್ಲಿ ಪ್ರಾರ್ಥಿಸಿದರು.

ನವದೆಹಲಿ, ಸೆಪ್ಟೆಂಬರ್ 15: ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣಪತಿ ದರ್ಶನ ಪಡೆದರು. ಈ ವೇಳೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಮಂಗಳಾರತಿ ಬೆಳಗಿ ದೇಶದ ಜನರ ಕ್ಷೇಮಾಭಿವೃದ್ಧಿಗಾಗಿ ವಿಘ್ನವಿನಾಶಕನಲ್ಲಿ ಪ್ರಾರ್ಥಿಸಿದರು.

ಪೂಜೆಯ ಫೋಟೋಗಳನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡ ಪ್ರಧಾನಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಗಣಪತಿ ದರ್ಶನಕ್ಕಾಗಿ ಭೇಟಿ ನೀಡಿದ್ದೆ. ಶ್ರೀಗಣೇಶ ಎಲ್ಲರಿಗೂ ಸುಖ-ಶಾಂತಿ ನೀಡಿ ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೂ ಪಿಯೂಷ್ ಗೋಯಲ್ ಅವರ ಮನೆಗೆ ತೆರಳಿ ಗಣೇಶನ ಆಶೀರ್ವಾದ ಪಡೆದರು. ಗಣೇಶೋತ್ಸವದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಈ ಹಬ್ಬವು ಎಲ್ಲರ ಬಾಳಿನಲ್ಲಿ ಹೊಸ ಚೈತನ್ಯ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಆಶಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us