AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on: Jun 09, 2024 | 10:11 AM

ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಭವನದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ವೀರ ಯೋಧರಿಗೆ ನಮನ ಸಲ್ಲಿಸಿದರು.

ನರೇಂದ್ರ ಮೋದಿ(Narendra Modi)ಯವರು ಇಂದು ರಾಷ್ಟ್ರಪತಿ ಭವನದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ವೀರ ಯೋಧರಿಗೆ ನಮನ ಸಲ್ಲಿಸಿದರು.

ಬೆಳಗ್ಗೆ ಏಳು ಗಂಟೆಗೆ ರಾಜ್‌ಘಾಟ್‌ಗೆ ಹೋಗಿ ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸಿದ್ದಾರೆ.ಮಾಣ ವಚನ ಸಮಾರಂಭ ಸಂಜೆ 5 ಗಂಟೆಗೆ ಆರಂಭವಾಗಲಿದ್ದು, ರಾತ್ರಿ 11ರವರೆಗೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ 2 ಗಂಟೆಯ ನಂತರ ರಾಷ್ಟ್ರಪತಿ ಭವನದ ಸುತ್ತಮುತ್ತಲಿನ ರಸ್ತೆಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಳ್ಳಲಿದ್ದು, ಪಾಸ್ ಹೊಂದಿರುವ ವಾಹನಗಳಿಗೆ ಮಾತ್ರ ಇಲ್ಲಿಗೆ ಪ್ರವೇಶ ನೀಡಲಾಗುವುದು. ದೆಹಲಿಯಲ್ಲಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ 1100 ಟ್ರಾಫಿಕ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಾರಂಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ನೆರೆಯ ಮತ್ತು ಹಿಂದೂ ಮಹಾಸಾಗರದ ಏಳು ದೇಶಗಳ ನಾಯಕರು ಭಾಗವಹಿಸಲಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ