ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಪ್ರಧಾನಿ ಮೋದಿಯಿಂದಲೂ ಭಾರೀ ಮೆಚ್ಚುಗೆ
ಬಾಲಿವುಡ್ ಸಿನಿಮಾ ಛಾವಾ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಬಿಡುಗಡೆಯಾದ "ಛಾವಾ" ಸಿನಿಮಾವನ್ನು ಶ್ಲಾಘಿಸಿದರು. ಛಾವಾ ಸಿನಿಮಾ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನವನ್ನು ಆಧರಿಸಿದೆ. ಈ ಸಿನಿಮಾದ ಪ್ರಭಾವ ದೇಶಾದ್ಯಂತ ಬೆಳೆಯುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ನವದೆಹಲಿ: ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿರುವ ಮಾರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜ್ ಜೀವನಾಧಾರಿತ ಕತೆಯನ್ನು ಒಳಗೊಂಡಿರುವ ಐತಿಹಾಸಿಕ ಸಿನಿಮಾ ಛಾವಾಗೆ ಪ್ರಧಾನಿ ನರೇಂದ್ರ ಮೋದಿಯಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಛಾವಾ ಸಿನಿಮಾ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನವನ್ನು ಆಧರಿಸಿದೆ. ಈ ಸಿನಿಮಾದ ಪ್ರಭಾವ ದೇಶಾದ್ಯಂತ ಬೆಳೆಯುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಮೋದಿ ಹೇಳಿದ್ದಾರೆ. ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಮಹಾರಾಷ್ಟ್ರ ಮತ್ತು ಮುಂಬೈ ಮರಾಠಿ ಮತ್ತು ಹಿಂದಿ ಚಿತ್ರರಂಗಕ್ಕೆ ಹೊಸ ಎತ್ತರವನ್ನು ನೀಡಿವೆ. ಇತ್ತೀಚಿನ ದಿನಗಳಲ್ಲಿ ‘ಛಾವಾ’ ಚಿತ್ರ ದೇಶಾದ್ಯಂತ ಸದ್ದು ಮಾಡುತ್ತಿದೆ. ಶಿವಾಜಿ ಸಾವಂತ್ ಅವರ ಮರಾಠಿ ಕಾದಂಬರಿಯಿಂದ ಸ್ಫೂರ್ತಿ ಪಡೆದ ಈ ಸಿನಿಮಾದಲ್ಲಿ ಸಂಭಾಜಿ ಮಹಾರಾಜರ ಶೌರ್ಯವನ್ನು ಪ್ರಸ್ತುತಪಡಿಸಲಾಗಿದೆ” ಎಂದು ಹೇಳಿದ್ದಾರೆ.
ಈ ಸಿನಿಮಾ ಫೆಬ್ರವರಿ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಇದು ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆಯನ್ನು ಪಡೆದಿದೆ. ಈ ಚಿತ್ರ ಪ್ರೇಕ್ಷಕರ ಮನ ಗೆದ್ದಿದ್ದು ಮಾತ್ರವಲ್ಲದೆ, ಇದುವರೆಗೆ ವಿಶ್ವದಾದ್ಯಂತ 310.5 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಛತ್ರಪತಿ ಶಿವಾಜಿಯ ಪಟ್ಟಾಭಿಷೇಕದ 350ನೇ ವರ್ಷ ಮತ್ತು ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
