ಡೆಹ್ರಾಡೂನ್ನಲ್ಲಿ ಪ್ರವಾಹದ ರಕ್ಷಣಾ ಸಿಬ್ಬಂದಿ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದ್ದರು. ಉತ್ತರಾಖಂಡದ ಡೆಹ್ರಾಡೂನ್ಗೆ ತಕ್ಷಣದ ಪರಿಹಾರ ಮತ್ತು ಪ್ರತಿಕ್ರಿಯೆಯನ್ನು ಒದಗಿಸುವಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ, ರಾಜ್ಯ ಆಡಳಿತ ಮತ್ತು ಇತರ ಸೇವಾ-ಆಧಾರಿತ ಸಂಸ್ಥೆಗಳ ಸಿಬ್ಬಂದಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ಪರಿಹರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಭರವಸೆ ನೀಡಿದರು.
ಡೆಹ್ರಾಡೂನ್, ಸೆಪ್ಟೆಂಬರ್ 11: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಮಳೆಯಿಂದ ಹಾನಿಗೊಳಗಾದ ರಾಜ್ಯದ ವಿಪತ್ತು ಪರಿಸ್ಥಿತಿಯನ್ನು ಪರಿಶೀಲಿಸಲು ಉತ್ತರಾಖಂಡಕ್ಕೆ ಭೇಟಿ ನೀಡಿದ್ದರು. ಅವರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಡೆಹ್ರಾಡೂನ್ನಲ್ಲಿ ಪ್ರಧಾನಿ ಮೋದಿ ಆ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ (Uttarakhand Flood) ಮತ್ತು ಭೂಕುಸಿತದ ನಂತರದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಉತ್ತರಾಖಂಡದಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಿಗೆ ಸಹಾಯ ಮಾಡಲು 1,200 ಕೋಟಿ ರೂ.ಗಳ ತಕ್ಷಣದ ಆರ್ಥಿಕ ನೆರವು ಘೋಷಿಸಿದರು.
ಈ ವೇಳೆ ಉತ್ತರಾಖಂಡದ ಪ್ರವಾಹದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ NDRF, SDRF, ಆಪ್ಡಾ ಮಿತ್ರ ಮತ್ತು ಇತರ ರಕ್ಷಣಾ ಕಾರ್ಯಕರ್ತರ ತಂಡಗಳನ್ನು ಭೇಟಿಯಾಗಿ, ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ಅವರ ಧೈರ್ಯ ಮತ್ತು ಸಮರ್ಪಣೆಯನ್ನು ಶ್ಲಾಘಿಸಿದರು. ಹಾಗೇ, ಪ್ರಧಾನಿ ಮೋದಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದರು. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಮತ್ತು ಇತರ ವಿಪತ್ತು ಪರಿಹಾರ ಸ್ವಯಂಸೇವಕರ ಸಿಬ್ಬಂದಿಯೊಂದಿಗೆ ಅವರು ಸಂವಾದ ನಡೆಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

